Webdunia - Bharat's app for daily news and videos

Install App

ಮಂಡ್ಯಕ್ಕೇ ಬಜೆಟ್ ನಲ್ಲಿ ಏನೂ ಕೊಟ್ಟಿಲ್ಲ: ಎಚ್ ಡಿ ಕುಮಾರಸ್ವಾಮಿಗೆ ಸಿದ್ದರಾಮಯ್ಯ ಟಾಂಗ್

Krishnaveni K
ಸೋಮವಾರ, 29 ಜುಲೈ 2024 (15:35 IST)
ಬೆಂಗಳೂರು: ಇತ್ತೀಚೆಗೆ ಘೋಷಣೆಯಾಗಿರುವ ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದಿದ್ದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಟಾಂಗ್ ಕೊಟ್ಟಿದ್ದಾರೆ.

ಕೇಂದ್ರ ಬಜೆಟ್ ಘೋಷಣೆಯಾದ ಬೆನ್ನಲ್ಲೇ ರಾಜ್ಯಕ್ಕೆ ಏನೂ ಸಿಕ್ಕಿಲ್ಲ ಎಂದು ಕಾಂಗ್ರೆಸ್ ನಾಯಕರು ಟೀಕಾ ಪ್ರಹಾರ ನಡೆಸಿದ್ದರು. ಇದರ ಬೆನ್ನಲ್ಲೇ ಎಚ್ ಡಿ ಕುಮಾರಸ್ವಾಮಿ ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಯಾವುದೇ ಅನ್ಯಾಯವಾಗಿಲ್ಲ ಎಂದು ರಾಜ್ಯ ನಾಯಕರಿಗೆ ತಿರುಗೇಟು ನೀಡಿದ್ದರು.

ಇದೀಗ ಕುಮಾರಸ್ವಾಮಿ ಮಾತಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ ಬಿಡಿ, ಮಂಡ್ಯಕ್ಕೇ ಏನು ಕೊಡುಗೆ ಕೊಟ್ಟಿದ್ದಾರೆ ಎಂದು ಮಂಡ್ಯ ಸಂಸದರೂ ಆಗಿರುವ ಕುಮಾರಸ್ವಾಮಿಗೆ ಸಿದ್ದು ಟಾಂಗ್ ಕೊಟ್ಟಿದ್ದಾರೆ. ಮಂಡ್ಯಕ್ಕೆ ಒಂದು ಕೈಗಾರಿಕೆಯನ್ನಾದರೂ ಕೊಟ್ಟರಾ ಎಂದು ವ್ಯಂಗ್ಯ ಮಾಡಿದ್ದಾರೆ.

ರಾಯಚೂರಿಗೆ ಏಮ್ಸ್ ಆಸ್ಪತ್ರೆ ಕೇಳಿದ್ದೆವು. ಆದರೆ ಕೊಡಲಿಲ್ಲ. ಎಲ್ಲಾ ಕೊಡುಗೆಗಳನ್ನೂ ಆಂಧ್ರ, ಬಿಹಾರಕ್ಕೆ ಕೊಟ್ಟಿದ್ದಾರೆ. ಸ್ವತಃ ಕುಮಾರಸ್ವಾಮಿ ಪ್ರತಿನಿಧಿಸುವ ಮಂಡ್ಯ ಕ್ಷೇತ್ರಕ್ಕೇ ಏನೂ ಕೊಟ್ಟಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರದ ಮತ್ತು ಕೇಂದ್ರ ಸಚಿವರಾಗಿರುವ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments