Publish Date: Wed, 02 Jul 2025 (14:27 IST)
Updated Date: Wed, 02 Jul 2025 (14:30 IST)
ಬೆಂಗಳೂರು: ಇಂದು ನಂದಿಬೆಟ್ಟದಲ್ಲಿ ನಡೆಯಲಿರುವ ವಿಶೇಷ ಸಂಪುಟ ಸಭೆಗೆ ಮುನ್ನ ಸಿಎಂ ಸಿದ್ದರಾಮಯ್ಯ ಟೆಂಪಲ್ ರನ್ ನಡೆಸಿದ್ದಾರೆ. ನಂದಿಬೆಟ್ಟದಲ್ಲಿರುವ ಭೋಗಿ ನಂದೀಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು ನಂದಿಬೆಟ್ಟದಲ್ಲಿ ನಡೆಯಲಿರುವ ವಿಶೇಷ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಶ್ರೀ ಭೋಗ ನಂದೀಶ್ವರ ದೇವಸ್ಥಾನಕ್ಕೆ ಸಂಪುಟ ಸಹದ್ಯೋಗಿಗಳ ಜೊತೆ ಭೇಟಿ ನೀಡಿ ನಂದೀಶ್ವರನ ದರ್ಶನ ಪಡೆದು, ಪೂಜೆ ಸಲ್ಲಿಸಿದೆ.
ನಾಡಿನಲ್ಲಿ ಮಳೆ, ಬೆಳೆ ಸಮೃದ್ಧಿಯಾಗಿ, ಸರ್ವರ ಬಾಳಲ್ಲಿ ಸುಖ, ಶಾಂತಿ, ಸಮೃದ್ಧಿ ತುಂಬಿರಲಿ ಎಂದು ದೇವರಲ್ಲಿ ಪ್ರಾರ್ಥಿಸಿದೆ ಎಂದಿದ್ದಾರೆ. ಈ ಭಾಗದ ಜನರ ಸಮಸ್ಯೆಗೆ ಧ್ವನಿಯಾಗುವ ಉದ್ದೇಶದಿಂದ ಇಲ್ಲಿ ಸಂಪುಟ ಸಭೆ ನಡೆಸಲಾಗುತ್ತಿದೆ.
ಸಿಎಂ ಸಿದ್ದರಾಮಯ್ಯಗೆ ಸಚಿವ ಜಮೀರ್ ಅಹ್ಮದ್ ಕೂಡಾ ಸಾಥ್ ನೀಡಿದ್ದಾರೆ. ಬಳಿಕ ಎಲ್ಲಾ ಸಚಿವರೂ ಭೋಗಿ ನಂದೀಶ್ವರ ದೇವಾಲಯದ ಮುಂದೆ ಫೋಟೋ ಸೆಷನ್ ಕೂಡಾ ನಡೆಸಿದ್ದಾರೆ.