ಬೆಂಗಳೂರು: ಈ ಬಾರಿ ದಸರಾ ಉದ್ಘಾಟನೆ ಮಾಡುವವರು ಯಾರು ಎಂದು ಇನ್ನೂ ಘೋಷಣೆಯಾಗಿಲ್ಲ. ಮೂಲಗಳ ಪ್ರಕಾರ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ದಸರಾ ಉದ್ಘಾಟನೆ ಮಾಡಲಿದ್ದಾರೆ.
ಇದಕ್ಕಾಗಿ ಸಿಎಂ ಸಿದ್ದರಾಮಯ್ಯ ಈಗಾಗಲೇ ಪತ್ರ ಮುಖೇನ ಸೋನಿಯಾ ಗಾಂಧಿಯವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಆದರೆ ಇದಕ್ಕೆ ಯಾವುದೇ ಉತ್ತರ ಬಂದಿಲ್ಲ. ಹೀಗಾಗಿ ಸ್ವತಃ ಸಿದ್ದರಾಮಯ್ಯನವರೇ ದೆಹಲಿಗೆ ತೆರಳಿ ಸೋನಿಯಾ ಗಾಂಧಿಯವರನ್ನು ಆಹ್ವಾನಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಮೈಸೂರು ದಸರಾ ಕಳೆದ ಬಾರಿ ಹಂಪ ನಾಗರಾಜಯ್ಯ ದಸರಾ ಉದ್ಘಾಟನೆ ಮಾಡಿದ್ದರು. ಸಾಮಾನ್ಯವಾಗಿ ನಾಡಿನ ಸಾಹಿತಿಗಳು, ಖ್ಯಾತನಾಮರೇ ದಸರಾ ಉದ್ಘಾಟನೆ ಮಾಡುತ್ತಾರೆ. ಬೇರೆ ರಾಜ್ಯದ ಅಥವಾ ರಾಷ್ಟ್ರದ ರಾಜಕೀಯ ಗಣ್ಯರು ದಸರಾ ಉದ್ಘಾಟನೆ ಮಾಡಿದ್ದು ತೀರಾ ಕಡಿಮೆ.
ಆದರೆ ಈ ಬಾರಿ ಸೋನಿಯಾ ಗಾಂಧಿಯವರನ್ನು ಕರೆತರಲು ಪ್ರಯತ್ನ ನಡೆದಿದೆ. ಇದಕ್ಕೆ ಸೋನಿಯಾ ಗಾಂಧಿ ಒಪ್ಪುತ್ತಾರಾ, ಬಿಜೆಪಿಯಿಂದ ಯಾವ ರೀತಿ ಪ್ರತಿಕ್ರಿಯೆ ಬರುತ್ತದೆ ಎಂದು ಕಾದು ನೋಡಬೇಕಿದೆ.