Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ಆಕಸ್ಮಾತ್ ಗೆದ್ರೂ ಅವರನ್ನು ವಿರೋಧ ಪಕ್ಷದಲ್ಲೇ ಕೂರಿಸುತ್ತೇನೆ : ಬಿ.ಎಸ್.ಯಡಿಯೂರಪ್ಪ

ಸಿದ್ದರಾಮಯ್ಯ ಆಕಸ್ಮಾತ್ ಗೆದ್ರೂ ಅವರನ್ನು ವಿರೋಧ ಪಕ್ಷದಲ್ಲೇ ಕೂರಿಸುತ್ತೇನೆ : ಬಿ.ಎಸ್.ಯಡಿಯೂರಪ್ಪ
ಬೆಂಗಳೂರು , ಸೋಮವಾರ, 13 ಸೆಪ್ಟಂಬರ್ 2021 (12:43 IST)
ಬೆಂಗಳೂರು : ಮುಂಬರುವ ಚುನಾವಣೆಯಲ್ಲಿ ಆಕಸ್ಮಾತ್ ಸಿದ್ದರಾಮಯ್ಯ ಗೆಲುವು ಸಾಧಿಸಿದರೂ ಅವರನ್ನು ವಿರೋಧ ಪಕ್ಷದಲ್ಲೇ ಕೂರಿಸುವುದಾಗಿ ಮಾಜಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಯಡಿಯೂರಪ್ಪ, ಸಿಎಂ ಬಸವರಾಜಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ. ಅವರಿಗೆ ತಮ್ಮಿಂದ ಅಗತ್ಯವಿರುವ ನೆರವು ನೀಡುತ್ತೇನೆ. ಮುಂಬರುವ ದಿನಗಳಲ್ಲಿಯೂ ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶ್ರಮ ವಹಿಸುತ್ತೇವೆ. ಪಕ್ಷ ಬಲವರ್ದನೆಗೆ ತಾವು ಹಾಗೂ ಪಕ್ಷದ ರಾಜ್ಯಾಧ್ಯಕ್ಷರು ರಾಜ್ಯದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಯತ್ನಿಸುವುದಾಗಿ ತಿಳಿಸಿದರು. ಮುಖ್ಯಮಂತ್ರಿಯಾಗಿಯೇ ಕೆಲಸ ಮಾಡಬೇಕೆಂದು ಏನಿಲ್ಲ. ಒಬ್ಬ ಶಾಸಕನಾಗಿಯೂ ಕೆಲಸಗಳನ್ನು ಮಾಡುತ್ತೇನೆ ಎಂದರು.
ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಸಿಎಂ ಯಡಿಯೂರಪ್ಪ ಅವರು ಸಿಎಂ ಗಾದಿಯಿಂದ ಕೆಳಗಿಳಿದ ಬಳಿಕ ಇದು ಮೊದಲ ಅಧಿವೇಶನವಾಗಿದೆ. ಕಲಾಪದಲ್ಲಿ ಪಾಲ್ಗೊಳ್ಳುವ ಮುನ್ನ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಕೆಲ ವಿಚಾರಗಳ ಕುರಿತು ಚರ್ಚೆ ನಡೆಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಚೀನಾದ ನಿದ್ದೆಗೆಡಿಸಿದೆ ಚಂತು ಚಂಡಮಾರುತ..!