Publish Date: Tue, 14 May 2019 (16:38 IST)
Updated Date: Tue, 14 May 2019 (16:40 IST)
ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ ಮಾಜಿ ಸಿ.ಎಂ. ಸಿದ್ದರಾಮಯ್ಯ.
ಮಂಡ್ಯದಲ್ಲಿ ಸುಮಲತಾಗೆ ಸಿದ್ದರಾಮಯ್ಯ ಸಪೋರ್ಟ್ ಮಾಡಿದ್ದರು ಎನ್ನುವ ಜಗದೀಶ್ ಶೆಟ್ಟರ್ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ್ದು, ಶೆಟ್ಟರ್ ಗೆ ತಿರುಗೇಟು ನೀಡಿದ್ದಾರೆ ಸಿದ್ದರಾಮಯ್ಯ.
ಈ ತರಹ ಬೆಂಕಿ ಹಂಚುವುದರಲ್ಲಿ ಬಿಜೆಪಿಗರು ನಿಸ್ಸೀಮರು. ಸುಳ್ಳು ಹೇಳುವುದು ಬಿಟ್ಟು ಅವರಿಗೇನೂ ಗೊತ್ತಿಲ್ಲ.
ಸುಮಲತಾಗೆ ಸಪೋರ್ಟ್ ಮಾಡಿದ್ದು, ನಾವಾ ಅವರಾ...?
ನಾವು ಸಪೋರ್ಟ್ ಮಾಡಿದ್ದೇವೆ ಎನ್ನುವುದು ಸುಳ್ಳು. ದೋಸ್ತಿ ಸರ್ಕಾರಕ್ಕೆ ಸಿದ್ದರಾಮಯ್ಯ ಟೈ ಬಾಂಬ್ ಫಿಕ್ಸ್ ಮಾಡಿದ್ದಾರೆ ಅನ್ನೋದು ಸುಳ್ಳು.
ದೋಸ್ತಿ ಸರ್ಕಾರ ಇನ್ನೂ ನಾಲ್ಕು ವರ್ಷ ಭದ್ರವಾಗಿರುತ್ತದೆ. ಬಿಜೆಪಿ ಅವರಿಗೆ ಹೇಳಿಕೊಳ್ಳಲು ಏನೂ ವಿಷಯವಿಲ್ಲ.
ಹೀಗಾಗಿ ಈ ರೀತಿ ಸುಳ್ಳು ಹೇಳುತ್ತ ಓಡಾಡುತ್ತಿದ್ದಾರೆ ಎಂದಿದ್ದಾರೆ.