Select Your Language

Notifications

webdunia
webdunia
webdunia
webdunia

ಶಿಕ್ಷಣ ಸಚಿವ ಬಿಸಿ ನಾಗೇಶ್ ಭ್ರಷ್ಟಾಚಾರಕ್ಕೆ ಪುರಾವೆ ಸಿಕ್ಕಿದೆ ಎಂದು ಸಿದ್ದರಾಮಯ್ಯ ಟ್ವೀಟ್

webdunia
bangalore , ಭಾನುವಾರ, 4 ಸೆಪ್ಟಂಬರ್ 2022 (19:57 IST)
ಶಿಕ್ಷಣ ಸಚಿವ ಬಿಸಿ ನಾಗೇಶ್ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಜೊತೆಗೆ ಶಿಕ್ಷಣವೋ? ಭಕ್ಷಣೆಯೋ ಎಂದು ಸರ್ಕಾರಕ್ಕೆ ಪ್ರಶ್ನೆ ಮಾಡಿದಾರೆ.
 
 ಪ್ರಾರಂಭದಿಂದಲೇ ಶಿಕ್ಷಣ ಸಚಿವ ಬಿ ಸಿ ನಾಗೇಶ್ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬರುತ್ತಿದೆ.ಈಗ ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಸಂಘಟನೆ ಪುರಾವೆಗಳನ್ನು ನೀಡಿದೆ. ಈ ಸಂಘಟನೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದಿದೆಯಂತೆ,ಇದು ಶಿಕ್ಷಣವೋ? ಭಕ್ಷಣೆಯೋ? ಭಕ್ಷಣ ಸಚಿವ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.
 
ಖಾಸಗಿ ಶಾಲೆಗಳ ಪರವಾನಿಗೆಯಿಂದ ಹಿಡಿದು ನಿವೃತ್ತ ಶಿಕ್ಷಕರ ಪಿಂಚಣಿವರೆಗೆ ಶಿಕ್ಷಣ ಇಲಾಖೆಯಲ್ಲಿ ಲಂಚ ನೀಡದೆ ಯಾವ ಕೆಲಸವೂ ಆಗುತ್ತಿಲ್ಲವಂತೆ.ಲಂಚ ಪಡೆದು ಖಾಸಗಿ ಶಾಲೆಗಳಿಗೆ ಅಕ್ರಮವಾಗಿ ಅನುಮತಿ ನೀಡುವ ಇಲಾಖೆಯೇ,ಮತ್ತೆ ಅಕ್ರಮ ಎಸಗಿದ ಆರೋಪದ ಮೇಲೆ ದುಡ್ಡು ವಸೂಲಿ ಮಾಡುತ್ತಿದೆಯಂತೆ.ಎಂಥಾ ಅದ್ಭುತ ಪ್ಲಾನ್? ಇದು ಶಿಕ್ಷಣವೋ? ಭಕ್ಷಣೆಯೋ? ಕಾಂಗ್ರೆಸ್‌ನ ಮಹತ್ವಾಕಾಂಕ್ಷೆಯ ಶಿಕ್ಷಣ ಹಕ್ಕಿನ ಕಾಯ್ದೆಯನ್ನೂ ರಾಜ್ಯ ಶಿಕ್ಷಣ ಇಲಾಖೆ ಹಳ್ಳ ಹಿಡಿಸಿದೆ.2012ರಲ್ಲಿ ಆರ್ ಟಿ ಇ ಫಲಾನುಭವಿ ವಿದ್ಯಾರ್ಥಿಗಳು 1.20 ಲಕ್ಷ, ಈಗ ಈ ವಿದ್ಯಾರ್ಥಿಗಳ ಸಂಖ್ಯೆ 7 ಸಾವಿರಕ್ಕೆ ಇಳಿದಿದೆ.ಇದು ಶಿಕ್ಷಣವೋ? ಭಕ್ಷಣೆಯೋ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಮಹಿಳಾ ಘಟಕ ದಿಂದ ಪ್ರತಿಭಟನೆ..!