Publish Date: Sun, 14 Oct 2018 (16:39 IST)
Updated Date: Sun, 14 Oct 2018 (16:42 IST)
ಮಂಡ್ಯ ಲೋಕಸಭೆ ಉಪಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಪ್ರಮುಖ ಬಿಜೆಪಿ ಮುಖಂಡರ ಮನೆಗೆ ಡಾ.ಸಿದ್ದರಾಮಯ್ಯ ಭೇಟಿ ನೀಡಿದರು.
ಮಂಡ್ಯ ಬಿಜೆಪಿ ಅಭ್ಯರ್ಥಿಯಾಗಿರುವ ಡಾ.ಸಿದ್ದರಾಮಯ್ಯ, ಟಿಕೆಟ್ ಘೋಷಣೆ ಆದ ಬಳಿಕ ಮೊದಲ ಬಾರಿಗೆ ಮಂಡ್ಯಕ್ಕೆ ಆಗಮಿಸಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷ ನಾಗಣ್ಣಗೌಡ ಅವರನ್ನು ಬಿಟ್ಟರೆ, ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಗೈರಾಗಿದ್ದರು.
ಸಿದ್ದರಾಮಯ್ಯ ಗೆ ಟಿಕೆಟ್ ಕೊಟ್ಟಿದ್ದಕ್ಕೆ ಮಂಡ್ಯ ಬಿಜೆಪಿಯಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಜೊತೆ ಪ್ರಚಾರಕ್ಕೆ ಹೋಗಲು ಪ್ರಮುಖರ ಹಿಂದೇಟು ಹಾಕುತ್ತಿದ್ದಾರೆ. ಹೀಗಿದ್ದರೂ ಬಿಜೆಪಿ ಅಭ್ಯರ್ಥಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಬಾರಿ ಚುನಾವಣೆಯಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಗೆಲ್ಲುವೆ. ಸಣ್ಣಪುಟ್ಟ ಗೊಂದಲಗಳನ್ನು ಸರಿಪಡಿಸಿಕೊಳ್ಳುವೆ. ಸೋಮವಾರ ನಾಮಪತ್ರ ಸಲ್ಲಿಕೆ ಮಾಡಲಾಗುವುದು ಎಂದಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಹಾಕದಿರುವುದು ಬಿಜೆಪಿಗೆ ವರದಾನ ಆಗಲಿದೆ. ಹೀಗಂತ ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
Jagadeesh
Publish Date: Sun, 14 Oct 2018 (16:39 IST)
Updated Date: Sun, 14 Oct 2018 (16:42 IST)