ಬೆಂಗಳೂರು: ಬೆಂಗಳೂರು ನಗರದಲ್ಲಿರುವ ಎಲ್ಲ ಗುಂಡಿಗಳನ್ನು ಒಂದು ವಾರದೊಳಗೆ ಮುಚ್ಚುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ.
ನಗರದ ಐದು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಅಕ್ಟೋಬರ್ 31 ರೊಳಗೆ ಗುಂಡಿಗಳನ್ನು ಮುಚ್ಚಲು ಸಿಎಂ ಕಳೆದ ತಿಂಗಳು ಗಡುವು ವಿಧಿಸಿದ್ದರು. ಇದೀಗ ಮತ್ತೆ ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ.
ನಾನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ ರಾವ್ ಮತ್ತು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಸೇರಿದಂತೆ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಒಂದು ವಾರದೊಳಗೆ ಗುಂಡಿಗಳನ್ನು ಮುಚ್ಚಬೇಕು ಎಂದು ಸಿದ್ದರಾಮಯ್ಯ ಹೇಳಿದರು.
ನಗರದ ವಿವಿಧ ಭಾಗಗಳಲ್ಲಿ ವೈಟ್ ಟಾಪಿಂಗ್ ಕೆಲಸ ನಡೆಯುತ್ತಿದ್ದು, ವೈಟ್ ಟಾಪಿಂಗ್ ರಸ್ತೆಗಳು 25 ರಿಂದ 30 ವರ್ಷ ಬಾಳಿಕೆ ಬರುವುದರಿಂದ ಗುಂಡಿಗಳ ಸಮಸ್ಯೆಯನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ. ನಗರದಲ್ಲಿನ ಗುಂಡಿಗಳನ್ನು ಮುಚ್ಚುತ್ತೇವೆ ಮತ್ತು ರಸ್ತೆಗಳಿಗೆ ವೈಟ್ ಟಾಪಿಂಗ್ ಕೂಡ ಮಾಡುತ್ತೇವೆ ಎಂದು ಅವರು ಹೇಳಿದರು.