Select Your Language

Notifications

webdunia
webdunia
webdunia
webdunia

ಅನರ್ಹ ಶಾಸಕರನ್ನು ಮತ್ತೆ ಕಾಂಗ್ರೆಸ್ ಗೆ ಆಹ್ವಾನಿಸಿದ ಸಿದ್ದರಾಮಯ್ಯ

ಚಿಕ್ಕಮಗಳೂರು
ಚಿಕ್ಕಮಗಳೂರು , ಮಂಗಳವಾರ, 15 ಅಕ್ಟೋಬರ್ 2019 (08:19 IST)
ಚಿಕ್ಕಮಗಳೂರು : ಯಾರೇ ಆದರೂ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಬಂದರೆ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಪರೋಕ್ಷವಾಗಿ ಅನರ್ಹ ಶಾಸಕರಿಗೆ ಆಹ್ವಾನ ನೀಡಿದ್ದಾರೆ.




ಈ ಬಗ್ಗೆ ಸುದ್ದಿಗಾರರೊಂದಿಗೆ ಅವರು, ಪಕ್ಷದ ಸಿದ್ಧಾಂತ ಒಪ್ಪಿಕೊಂಡು ಯಾರೇ ಬಂದರೂ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ. ಈಗಾಗಲೇ ಕೆಲವರು ನನ್ನನ್ನ ಸಂಪರ್ಕಿಸಿದ್ದಾರೆ. ಆದರೆ ಎಲ್ಲವನ್ನೂ ಹೇಳಲು ಆಗುವುದಿಲ್ಲ ಎಂದು ಹೇಳಿದ್ದಾರೆ.


ಅಲ್ಲದೇ ಪಕ್ಷಕ್ಕೆ ಸೇರಿಕೊಳ್ಳುವವರಿಗೆ ಉಪಚುನಾವಣೆಯ ಟಿಕೆಟ್ ನೀಡುವ ಕುರಿತು ಭರವಸೆ ನೀಡುವುದಿಲ್ಲ. ಟಿಕೆಟ್ ಸಿಗುತ್ತೋ?ಇಲ್ಲವೋ? ಗೊತ್ತಿಲ್ಲ. ಅದನ್ನ ಹೈಕಮಾಂಡ್ ನಿರ್ಧರಿಸುತ್ತಾರೆ ಎಂದು ಅವರು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಹಣಕ್ಕಾಗಿ ಅಜ್ಜಿಯ ಒಳ ಉಡುಪಿಗೆ ಕೈ ಹಾಕಿದ ಮೊಮ್ಮಗ