Select Your Language

Notifications

webdunia
webdunia
webdunia
webdunia

ಬೆಂಕಿಯಂತಿರುವ ಸಿದ್ದರಾಮಯ್ಯರನ್ನು ಮುಟ್ಟಿದ್ರೆ ಭಸ್ಮ ಆಗ್ತಾರೆ: ಜಮೀರ್ ಅಹ್ಮದ್

ಬೆಂಕಿಯಂತಿರುವ ಸಿದ್ದರಾಮಯ್ಯರನ್ನು ಮುಟ್ಟಿದ್ರೆ ಭಸ್ಮ ಆಗ್ತಾರೆ: ಜಮೀರ್ ಅಹ್ಮದ್

Sampriya

ಬಳ್ಳಾರಿ , ಬುಧವಾರ, 26 ಫೆಬ್ರವರಿ 2025 (17:02 IST)
Photo Courtesy X
ಬಳ್ಳಾರಿ: ಸಿಎಂ ಸಿದ್ದರಾಮಯ್ಯ ಬೆಂಕಿ ಇದ್ದ ಹಾಗೇ ಅವರನ್ನು ಮುಟ್ಟಿದ್ರೆ ಭಸ್ಮ ಆಗ್ತಾರೆ ಎಂದು ವಿರೋಧಿಗಳಿಗೆ ಸಚಿವ ಜಮೀರ್ ಅಹ್ಮದ್ ಖಾನ್ ಕೌಂಟರ್‌ ನೀಡಿದರು.

ಪವರ್‌ ಫೈಟ್‌ ಬಗ್ಗೆ ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಅವರು, ಸಿದ್ದರಾಮಯ್ಯ ಅವರು ಬೆಂಕಿಯಾ ಹಾಗೇ, ಯಾರಿಂದಲೂ ಮುಟ್ಟೋಕಾಗಲ್ಲ, ಮುಟ್ಟಿದ್ರೆ ಭಸ್ಮ ಆಗ್ತಾರೆ. ಸಿಎಂ, ಕೆಪಿಸಿಸಿ ಸ್ಥಾನ ಖಾಲಿ ಇಲ್ಲ. ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಇದ್ದಾರೆ. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದಾರೆ. ಆ ಸ್ಥಾನಗಳು ಖಾಲಿಯಾದ್ರೆ ಚರ್ಚೆ ಮಾಡ್ಮೋದೂ ಎಂದರು.

ಸಿಎಂ ಸಿದ್ದರಾಮಯ್ಯ ಅವರ ಖುರ್ಚಿ ಮುಟ್ಟಲು ಯಾರಿಂದಲೂ ಸಾಧ್ಯವಿಲ್ಲ. ಅದೊಂಥರ ಬೆಂಕಿ ಅದು, ಬೆಂಕಿ ಮುಟ್ಟಿದ್ರೆ ಸುಟ್ಟೋಗ್ತಾರೆ. ಸಿದ್ದರಾಮಯ್ಯ ಬೆಂಕಿ ಇದ್ದಂತೆ, ನಾವು ಟಗರು ಅಂತೀವಿ. ಆ ಬೆಂಕಿ ಮುಟ್ಟೋಕೆ ಸಾಧ್ಯವಿಲ್ಲ, ಮುಟ್ಟಿದ್ರೆ ಭಸ್ಮ ಆಗ್ತಾರೆ ಎಂದು ಎದುರಾಳಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ನಮ್ಮ ಪಕ್ಷ ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧ. ಹೈಕಮಾಂಡ್ ಬದಲಾವಣೆ ಮಾಡಬೇಕು ಅಂತ ನಿರ್ಧಾರ ಮಾಡಿದ್ರೆ ನಾವು ಅಭಿಪ್ರಾಯ ತಿಳಿಸಬಹುದು. ಆದ್ರೆ ಹೈಕಮಾಂಡ್‌ ಯಾವುದೇ ನಿರ್ಧಾರಕ್ಕೆ ಇನ್ನೂ ಬಂದಿಲ್ಲ. ನಮ್ಮ ಪಕ್ಷದವರು ಯಾರೂ ಕೂಡ ಸಿದ್ದರಾಮಯ್ಯ ಬದಲಾವಣೆ ಮಾಡಲಿ ಅಂತಲೂ ಹೇಳಿಲ್ಲಾ. ಎಲ್ಲಾ ಸಮಾಜಕ್ಕೂ ಸಿಎಂ ಆಗಬೇಕು ಅಂತ ಆಸೆ ಇರುತ್ತೆ. ದಲಿತ, ಅಲ್ಪಸಂಖ್ಯಾತ, ಎಸ್ಸಿ, ಎಸ್ಟಿ, ಲಿಂಗಾಯತ ಸಮುದಾಯ ಎಲ್ಲರೂ ಸಿಎಂ ಆಗಬೇಕು ಅಂತಾರೆ. ತೀರ್ಮಾನ ಹೈ ಕಮಾಂಡ್‌ಗೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರು: ಹೊಟೇಲ್ ಟೆರೇಸ್‌ಗೆ ಕರೆದೊಯ್ದು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ