Select Your Language

Notifications

webdunia
webdunia
webdunia
Friday, 11 April 2025
webdunia

ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಿದ್ದ ಸಿದ್ದರಾಮಯ್ಯಗೆ ಹಿನ್ನಡೆಯಾಗಿದೆ: ವಿಜಯೇಂದ್ರ

MUDA Scam

Sampriya

ಬೆಂಗಳೂರು , ಸೋಮವಾರ, 27 ಜನವರಿ 2025 (17:18 IST)
ಬೆಂಗಳೂರು: ಮೈಸೂರಿನ ಮುಡಾ ಹಗರಣದಲ್ಲಿ ಬಿ ರಿಪೋರ್ಟ್‌ ಹಾಕಿಸಿಕೊಂಡು ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಿದ್ದ ಸಿಎಂ  ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಲೋಕಾಯುಕ್ತ  ಸಂಸ್ಥೆಯ ತನಿಖೆ ಏನು ಎಂಬುದನ್ನು ಮಾಧ್ಯಮಗಳೇ ತೋರಿಸಿವೆ. ಸಿದ್ದರಾಮಯ್ಯ ಅವರ ಬಾಮೈದ ನೋಟಿಸ್‌ ಕೊಡದೇ ಇದ್ದರೂ ರಾತ್ರಿ 8 ರಿಂದ 9 ಗಂಟೆ ವೇಳೆಗೆ ಮೈಸೂರಿನ ಲೋಕಾಯುಕ್ತ ಕಚೇರಿಗೆ ಭೇಟಿ ಕೊಡುತ್ತಿದ್ದರು ಎಂದು ಹೇಳಿದರು.

ಈ ಮೂಲಕ ಸಿಎಂ ಕುಟುಂಬಕ್ಕೆ ಎಷ್ಟು ಮುಕ್ತ ವ್ಯವಸ್ಥೆ ಇತ್ತೆಂಬುದು ಬಹಿರಂಗವಾಗಿದೆ. ಮೈಸೂರಿನ ಮುಡಾ ಹಗರಣದ ವಿಷಯದಲ್ಲಿ ಬಿಜೆಪಿ, ಜೆಡಿಎಸ್‌ ಒಟ್ಟಾಗಿ ಪಾದಯಾತ್ರೆ ಮಾಡಿದ್ದೆವು. ನಮ್ಮ ಹೋರಾಟದ ಪರಿಣಾಮವಾಗಿ ಮುಖ್ಯಮಂತ್ರಿಯವರ ಪತ್ನಿ 14 ನಿವೇಶಗಳನ್ನು ಹಿಂತಿರಗಿಸುತ್ತೇವೆ ಎಂದು ರಾತ್ರೋರಾತ್ರಿ ಮುಡಾಕ್ಕೆ ಪತ್ರ ಬರೆದಿದ್ದರು. ಆ ಪತ್ರದ ಮೂಲಕ ಹಗರಣದಿಂದ ಹೊರಕ್ಕೆ ಬಂದ ಭ್ರಮೆಯಲ್ಲಿ ಮುಖ್ಯಮಂತ್ರಿಗಳೂ ಇದ್ದರು ಎಂದರು.

ಇದೀಗ ಸಚಿವ ಬೈರತಿ ಸುರೇಶ್‌, ಸಿಎಂ ಪತ್ನಿಗೆ ಇ.ಡಿ ನೋಟಿಸ್‌ ಕೊಟ್ಟಿದೆ. ತನಿಖಾ ಸಂಸ್ಥೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಸಂಸದ ತೇಜಸ್ವಿ ಸೂರ್ಯ, ಗಾಯಕಿ ಶಿವಶ್ರೀ ಸ್ಕಂದ ಮದುವೆ ಡೇಟ್ ಫಿಕ್ಸ್‌