Select Your Language

Notifications

webdunia
webdunia
webdunia
webdunia

ಭಾನುವಾರ ಬಿಎಂಟಿಸಿ ಬಸ್ ಕಂಡಕ್ಟರ್ ಆಗಲಿದ್ದಾರೆ ಸಿದ್ದರಾಮಯ್ಯ…!

Siddaramaiah will become a BMTC bus conductor on Sunday...!
ಬೆಂಗಳೂರು , ಶನಿವಾರ, 10 ಜೂನ್ 2023 (07:33 IST)
ಬೆಂಗಳೂರು :  ಒಂದು ದಿನದ ಮಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸ್ ಕಂಡಕ್ಟರ್ ಆಗಿ ಬದಲಾಗಲಿದ್ದಾರೆ. ಹೌದು….ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಪೈಕಿ ಮೊಟ್ಟಮೊದಲ ಯೋಜನೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ‘ಶಕ್ತಿ’ಯೋಜನೆಗೆ ಜೂನ್ 11ರಂದು ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ.

ಸಿಎಂ ಭಾನುವಾರ ಬೆಂಗಳೂರಿನ ಮೆಜೆಸ್ಟಿಕ್ನಿಂದ ಹೊರಡುವ ಮಾರ್ಗ ಸಂಖ್ಯೆ 43ರ ಬಿಎಂಟಿಸಿ ಬಸ್ನಲ್ಲಿ ಆ ದಿನ ಪಾರ್ಟ್ಟೈಂ ಕಂಡಕ್ಟರ್ ಆಗಿ ಮಹಿಳಾ ಪ್ರಯಾಣಿಕರ ಬಳಿ ತೆರಳಿ ‘ಟಿಕೆಟ್ ಟಿಕೆಟ್…’ ಎನ್ನುತ್ತಾ ಉಚಿತ ಟಿಕೆಟ್ ವಿತರಿಸಲಿದ್ದಾರೆ.

ಇದೇ ಭಾನುವಾರ (ಜೂ.11) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಜೆಸ್ಟಿಕ್ನಿಂದ ನಾಡಿನ ಶಕ್ತಿಕೇಂದ್ರವಾದ ವಿಧಾನಸೌಧಕ್ಕೆ ತೆರಳುವ ರೂಟ್ ನಂ.43 ಬಸ್ನಲ್ಲಿ ಕಂಡಕ್ಟರ್ ರೀತಿ ಟಿಕೆಟ್ ವಿತರಿಸುವ ಮೂಲಕ ಈ ಮಹಾತ್ವಾಕಾಂಕ್ಷಿ ಯೋಜನೆಗೆ ವಿಶಿಷ್ಟ ರೀತಿಯಲ್ಲಿ ಚಾಲನೆ ನೀಡಲಿದ್ದಾರೆ. ಅನಂತರ ವಿಧಾನಸೌಧದಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ಯೋಜನೆಗೆ ಅಧಿಕೃತ ಚಾಲನೆ ನೀಡಲಿದ್ದಾರೆ.

ಇಡೀ ರಾಷ್ಟ್ರದ ಗಮನ ಸೆಳೆದಿರುವ ಗ್ಯಾರಂಟಿ ಯೋಜನೆಗಳ ಉದ್ಘಾಟನೆಯೂ ಸಹ ವಿಭಿನ್ನವಾಗಿರಬೇಕು ಎಂಬ ಆಲೋಚನೆಯಲ್ಲಿರುವ ಸಿದ್ದರಾಮಯ್ಯ ಅವರ ಥಿಂಕ್ ಟ್ಯಾಂಕ್ ಈ ಶೈಲಿಯಲ್ಲಿ ಕಾರ್ಯಕ್ರಮ ರೂಪಿಸಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಪರ್ ಜಾಯ್ ಚಂಡಮಾರುತದ ಎಫೆಕ್ಟ್