ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಯನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿದೆ.
ಈ ನಡುವೆ ವಿಪಕ್ಷ ನಾಯಕ ಸಿದ್ದರಾಮಯ್ಯ ಶಿರಾ ಹಾಗೂ ಆರ್ ಆರ್ ನಗರ ಕ್ಷೇತ್ರಗಳಲ್ಲಿ ಮತಬೇಟೆಗೆ ತಮ್ಮದೇ ಆದ ರಣತಂತ್ರದ ಮೊರೆ ಹೋಗಿದ್ದಾರೆ.
ಉಪ ಚುನಾವಣೆಗೆ ನಾಮಪತ್ರ ಸಲ್ಲಿಸುವ ದಿನದಿಂದ ಕೊನೆವರೆಗೂ ಅಖಾಡದಲ್ಲಿದ್ದು ಭರ್ಜರಿ ಪ್ರಚಾರ ನಡೆಸಲು ಸಿದ್ದರಾಮಯ್ಯ ನಿರ್ಧಾರ ಮಾಡಿದ್ದಾರೆ.
ಎರಡೂ ಕ್ಷೇತ್ರಗಳಿಗೆ ಕಾಂಗ್ರೆಸ್ ಈಗಾಗಲೇ ತಂಡಗಳನ್ನು ಮಾಡಿ ಜವಾಬ್ದಾರಿಗಳನ್ನು ಹಂಚಿದ್ದು, ಬೈ ಎಲೆಕ್ಷನ್ ಗೆಲುವಿನ ಮೇಲೆ ಕಾಂಗ್ರೆಸ್ ಕಣ್ಣಿಟ್ಟಿದೆ.