Publish Date: Tue, 26 Jun 2018 (09:34 IST)
Updated Date: Tue, 26 Jun 2018 (09:36 IST)
ಬೆಂಗಳೂರು: ಸಿಎಂ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ನಡುವೆ ನಡೆಯುತ್ತಿರುವ ತೆರೆಮರೆಯ ಅಸಮಾಧಾನ ಮತ್ತೊಂದು ಹಂತಕ್ಕೆ ಬಂದಿದೆ.
ಬಜೆಟ್ ಮಂಡನೆ ವಿಚಾರದಲ್ಲಿ ಇಬ್ಬರೂ ಅಸಮಾಧಾನ ಹೊಂದಿದ್ದರು. ಇಬ್ಬರೂ ನಾಯಕರು ಪರೋಕ್ಷವಾಗಿ ಟಾಂಗ್ ಕೊಟ್ಟುಕೊಂಡಿದ್ದಾರೆ. ಈ ವಿಚಾರ ಇದೀಗ ಹೈಕಮಾಂಡ್ ಗೂ ತಲೆನೋವಾಗಿ ಪರಿಣಮಿಸಿದೆ.
ಇದರ ಬೆನ್ನಲ್ಲೇ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಕುಮಾರಸ್ವಾಮಿ ವಿರುದ್ಧ ಸಿದ್ದರಾಮಯ್ಯ ಗರಂ ಆಗಿದ್ದಾರೆ. ತಮ್ಮ ಆಪ್ತ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಕ್ಕೆ ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದಾರೆ. ತಮ್ಮ ಆಪ್ತ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ವರ್ಗಾವಣೆ ಮಾಡಿಯೂ ಬೇರೆ ಸ್ಥಾನ ಕೊಡದೇ ಇರುವುದಕ್ಕೆ ಸಿದ್ದರಾಮಯ್ಯ ಮತ್ತೆ ಸಿಎಂ ವಿರುದ್ಧ ಗರಂ ಆಗಿದ್ದಾರೆ ಎನ್ನಲಾಗಿದೆ. ಈ ಅಸಮಾಧಾನ ಎಲ್ಲಿಯವರೆಗೆ ಹೋಗಿ ಮುಟ್ಟುತ್ತದೋ ಕಾದು ನೋಡಬೇಕು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.