Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಕೊವಿಡ್ ನಿಂದ ಮೃತಪಟ್ಟವರಿಗೆ 5 ಲಕ್ಷ ಕೊಡಿ: ಸಿದ್ದರಾಮಯ್ಯ ಬೇಡಿಕೆ

webdunia
ಮಂಗಳವಾರ, 15 ಜೂನ್ 2021 (09:38 IST)
ಬೆಂಗಳೂರು: ಕೊವಿಡ್ ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಯಡಿಯೂರಪ್ಪ ನಿನ್ನೆ ಘೋಷಣೆ ಮಾಡಿದ್ದರು.


ಆದರೆ 1 ಲಕ್ಷ ರೂ. ಸಾಕಾಗಲ್ಲ, 5 ಲಕ್ಷ ರೂ. ನೀಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಇದಕ್ಕೆ ಕೇಂದ್ರದ ನೆರವು ಪಡೆಯಿರಿ ಎಂದಿದ್ದಾರೆ.

ಟ್ವೀಟ್ ಮಾಡಿರುವ ಸಿದ್ದರಾಮಯ್ಯ ‘ರಾಜ್ಯ ಸರ್ಕಾರ ಬಿಪಿಎಲ್ ಕುಟುಂಬದವರಿಗೆ ಕೊವಿಡ್ ನಿಂದ ಮೃತಪಟ್ಟರೆ 1 ಲಕ್ಷ ರೂ. ಪರಿಹಾರ ಘೋಷಿಸಿದೆ. ಆದರೆ ಇದನ್ನು 5 ಲಕ್ಷಕ್ಕೆ ಏರಿಕೆ ಮಾಡಿ. ಇದನ್ನು ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ಈ ಅವಕಾಶವನ್ನು ಬಳಸಿಕೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಸಾರಿಗೆ ಸಂಚಾರವಿಲ್ಲ, ಶಾಲೆಗೆ ಹೋಗೋದು ಹೇಗೆ?