Webdunia - Bharat's app for daily news and videos

Install App

ಕಾಂಗ್ರೆಸ್ ಯಾಕೆ ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡಿದೆ? ಸಿದ್ದರಾಮಯ್ಯ ಸ್ಪಷ್ಟನೆ

Webdunia
ಗುರುವಾರ, 25 ಅಕ್ಟೋಬರ್ 2018 (08:44 IST)
ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಅಪವಿತ್ರ ಮೈತ್ರಿ ಎಂದು ಟೀಕಿಸುವ ಬಿಜೆಪಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಗಳ ಮೂಲಕ ತಿರುಗೇಟು ಕೊಟ್ಟಿದ್ದಾರೆ.

ರಾಹುಲ್ ಗಾಂಧಿಯವರ ಆಶಯದಂತೆ ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ರಾಜ್ಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಒಂದಾಗಿ ಮುಂಬರುವ ಲೋಕಸಭೆ ಚುನಾವಣೆಯನ್ನು ಎದುರಿಸಲಿದೆ. ಇದರಿಂದ ಮತ ವಿಭಜನೆಯಾಗುವುದು ತಪ್ಪಿಸಿದಂತಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

ಅಷ್ಟೇ ಅಲ್ಲದೆ, ನಾವು ಬಿಜೆಪಿಯವರು ಕಾಶ್ಮೀರದಲ್ಲಿ ಪಿಡಿಪಿ ಜತೆ ಹೊಂದಾಣಿಕೆ ಮಾಡಿಕೊಂಡಂತೆ ಸೈದ್ಧಾಂತಿಕವಾಗಿ ವಿರೋಧವಿರುವ ಪಕ್ಷಗಳ ಜತೆ ಅಧಿಕಾರಕ್ಕಾಗಿ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದೂ ಅವರು ಸಮರ್ಥಿಸಿಕೊಂಡಿದ್ದಾರೆ.

ಈ ನಡುವೆ ಪ್ರಧಾನಿ ಮೋದಿ ವಿರುದ್ಧವೂ ವಾಗ್ದಾಳಿ ನಡೆಸಿರುವ ಅವರು ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವ ಮೊದಲು ದೇಶದಲ್ಲಿ 450. ರೂ. ಇದ್ದ ಗ್ಯಾಸ್ ಸಿಲಿಂಡರ್ ದರ ಈಗ 950 ರೂ.ಗೆ ತಲುಪಿದೆ. ಈ ಅಚ್ಚೇ ದಿನ್ ಎಂಬುದೇ ದೊಡ್ಡ ಹಗರಣ. ಇದರ ಹೆಸರಿನಲ್ಲಿ ಮೋದಿಯವರು ದೇಶದ ಬಡ ಜನರನ್ನು ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾವೇರಿ ನೀರು ವಿವಾದ: CWRC ಆದೇಶ ಎತ್ತಿಹಿಡಿದ ಪ್ರಾಧಿಕಾರ; ಕರ್ನಾಟಕಕ್ಕೆ ಹಿನ್ನಡೆ

ಅಮಿತ್ ಶಾ ಗೈರು ಅಪರಾಧ ಪ್ರಜ್ಞೆಯನ್ನು ಎತ್ತಿ ತೋರಿಸುತ್ತದೆ: ರಾಹುಲ್ ಗಾಂಧಿ ವ್ಯಂಗ್ಯ

ಊಟ ನೀಡುವಲ್ಲಿ ತಡವಾಗಿದ್ದಾಗ ಅತ್ತಿಗೆಯ ಜೀವವನ್ನೇ ತೆಗೆದ ಮೈದುನ

ಪ್ರಶ್ನೆ ಪತ್ರಿಕೆ ಸೋರಿಕೆ ಜಾಲ ನಿರ್ಮೂಲನೆ ಕೇಂದ್ರದ ಕಠಿಣ ಮಸೂದೆ ಬಗ್ಗೆ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ

ಮೇಘಾಲಯ ಹನಿಮೂನ್ ಮರ್ಡರ್ ಕೇಸ್, ಮಹತ್ವದ ಬದಲಾವಣೆ

ಮುಂದಿನ ಸುದ್ದಿ
Show comments