Publish Date: Wed, 05 Dec 2018 (08:44 IST)
Updated Date: Wed, 05 Dec 2018 (08:57 IST)
ಬೆಂಗಳೂರು: ಸಮ್ಮಿಶ್ರ ಸರ್ಕಾರ ಮತ್ತೊಂದು ಸಂಪುಟ ವಿಸ್ತರಣೆಗೆ ಸಜ್ಜಾಗುತ್ತಿದ್ದು, ಇಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಹತ್ವದ ಸಮನ್ವಯ ಸಮಿತಿ ಸಭೆ ನಡೆಯಲಿದೆ.
ಈ ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಪ್ರಮುಖವಾಗಿ ಚರ್ಚೆಯಾಗಲಿದ್ದು, ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ವಿಪಕ್ಷಗಳನ್ನು ಎದುರಿಸುವ ಬಗ್ಗೆಯೂ ಚರ್ಚೆ ನಡೆಯಲಿದೆ.
ಇಂದಿನ ಸಭೆಯಲ್ಲಿ ಶಾಸಕರ ನಡುವೆ ಒಮ್ಮತ ಮೂಡಿದಲ್ಲಿ ಇದೇ ವಾರಂತ್ಯ ಅಥವಾ ಮುಂದಿನ ವಾರವೇ ಸಚಿವ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆಯಿದೆ. ಕಾಂಗ್ರೆಸ್ ಶಾಸಕರಲ್ಲಿ ಜೆಡಿಎಸ್ ಪ್ರಾಬಲ್ಯದ ಬಗ್ಗೆ ಹಲವು ಅಸಮಾಧಾನಗಳಿದ್ದು, ಇಂದಿನ ಸಭೆಯಲ್ಲಿ ಅದು ಹೊರ ಬರುವ ಸಾಧ್ಯತೆಯಿದೆ. ಹೀಗಾಗಿ ಇಂದಿನ ಸಮನ್ವಯ ಸಮಿತಿ ಸಭೆಗೆ ಹೆಚ್ಚಿನ ಮಹತ್ವ ಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.