Publish Date: Fri, 30 Nov 2018 (11:04 IST)
Updated Date: Fri, 30 Nov 2018 (11:11 IST)
ಬೆಂಗಳೂರು: ಶನಿವಾರ ನಿಧನರಾದ ನಟ ಅಂಬರೀಶ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಿರಿಯ ನಟನನ್ನು ಸ್ಮರಿಸಿಕೊಂಡಿದ್ದಾರೆ.
ಫಿಲಂ ಚೇಂಬರ್ ವತಿಯಿಂದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅಂಬರೀಶ್ ನನಗೆ ಸುದೀರ್ಘ ಕಾಲದ ಗೆಳೆಯ. ಅವರ ಮಾತು ಒರಟಾದರೂ, ಹೃದಯದಿಂದ ಶ್ರೀಮಂತರಾಗಿದ್ದರು ಎಂದು ಸಿದ್ದರಾಮಯ್ಯ ಸ್ಮರಿಸಿಕೊಂಡಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸಿಎಂ ಕುಮಾರಸ್ವಾಮಿ, ಅಂಬರೀಶ್ ಪತ್ನಿ ಸುಮಲತಾ, ಪುತ್ರ ಅಭಿಷೇಕ್ ಅಂಬರೀಶ್, ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದ ಸ್ವಾಮೀಜಿ, ನಟರಾದ ಶಿವರಾಜ್ ಕುಮಾರ್, ರಾಕ್ ಲೈನ್ ವೆಂಕಟೇಶ್, ಫಿಲಂ ಚೇಂಬರ್ ಅಧ್ಯಕ್ಷ ಚಿನ್ನೇಗೌಡ ಸೇರಿದಂತೆ ಹಲವು ನಟ, ನಟಿಯರು ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ