Select Your Language

Notifications

webdunia
webdunia
webdunia
webdunia

ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ: ಶಿವಣ್ಣ, ಕಮಲ್ ಹಾಸನ್ ಭಾಗಿ

ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ: ಶಿವಣ್ಣ, ಕಮಲ್ ಹಾಸನ್ ಭಾಗಿ
ಬೆಂಗಳೂರು , ಶನಿವಾರ, 20 ಮೇ 2023 (13:46 IST)
Photo Courtesy: Twitter
ಬೆಂಗಳೂರು: ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಸಿಎಂ ಆಗಿ, ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಈ ವೇಳೆ ಸಾವಿರಾರು ಜನರು ನೆರೆದಿದ್ದರು.

ಕಾಂಗ್ರೆಸ್ ನ ಘಟಾನುಘಟಿ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಜೊತೆ ಸಿನಿ ಗಣ್ಯರೂ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು. ಶಿವರಾಜ್ ಕುಮಾರ್, ಕಮಲ್ ಹಾಸನ್, ದುನಿಯಾ ವಿಜಯ್ ಸೇರಿದಂತೆ ಸಿನಿ ಗಣ್ಯರೂ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಿವರಾಜ್ ಕುಮಾರ್, ದುನಿಯಾ ವಿಜಯ್ ಈ ಮೊದಲು ಕಾಂಗ್ರೆಸ್ ಪರ ಚುನಾವಣಾ ಪ್ರಚಾರ ನಡೆಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಸಿದ್ದರಾಮಯ್ಯ ಕಚೇರಿಗೆ ಬಂದ ಸ್ವೀಟ್ಸ್ ತಪಾಸಣೆ