Publish Date: Sun, 11 Nov 2018 (12:36 IST)
Updated Date: Sun, 11 Nov 2018 (12:38 IST)
ಬೆಂಗಳೂರು: ವಿವಾದದ ಹಿನ್ನಲೆಯಲ್ಲಿ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ವಿಶ್ರಾಂತಿ ನೆಪದಲ್ಲಿ ಗೈರು ಹಾಜರಾದ ಸಿಎಂ ಕುಮಾರಸ್ವಾಮಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.
ಟಿಪ್ಪು ಜಯಂತಿಯಲ್ಲಿ ಪಾಲ್ಗೊಂಡರೆ ಅಧಿಕಾರ ಹೋಗುತ್ತದೆ ಎಂಬ ನಂಬಿಕೆಯಿಂದ ಸಿಎಂ ಕಾರ್ಯಕ್ರಮಕ್ಕೆ ಗೈರು ಹಾಜರಾದರು ಎಂದು ಊಹಾಪೋಹಗಳಿತ್ತು. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಮಾಡಿದ ಟ್ವೀಟ್ ಕುಮಾರಸ್ವಾಮಿಗೆ ಪರೋಕ್ಷ ಟಾಂಗ್ ಕೊಟ್ಟಂತಿದೆ.
‘ಸಾರ್ವಜನಿಕ ಹಿತದೃಷ್ಟಿಯಿಂದ ಕೆಲವೊಮ್ಮೆ ರಾಜಿ ಮಾಡಿಕೊಳ್ಳಬೇಕಾಗುತ್ತದೆ. ನಾನೂ ಮಾಡಿರಬಹುದು. ಆದರೆ ಜಾತ್ಯಾತೀತೆಯಂತಹ ಮೂಲಭೂತದ ಸಿದ್ಧಾಂತದ ವಿಚಾರದಲ್ಲಿ ನಾನು ರಾಜಿ ಮಾಡಿಕೊಳ್ಳಲಾರೆ. ಅಧಿಕಾರ ಇರುತ್ತೆ, ಹೋಗುತ್ತೆ, ಐ ಡೋಂಟ್ ಕೇರ್’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಇದು ಕುಮಾರಸ್ವಾಮಿಯನ್ನು ಉದ್ದೇಶಿಸಿಯೇ ಮಾಡಿರುವ ಟ್ವೀಟ್ ಎಂದೇ ಬಣ್ಣಿಸಲಾಗುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.