Publish Date: Mon, 29 Oct 2018 (08:39 IST)
Updated Date: Mon, 29 Oct 2018 (08:41 IST)
ಬೆಂಗಳೂರು: ಲೋಕಸಭೆ ಉಪಚುನಾವಣೆ ರ್ಯಾಲಿಯಲ್ಲಿ ಮಾತನಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.
‘ಮಾನ್ಯ ಬಿಎಸ್ ವೈ ಅವರು ಸರ್ಕಾರ ಬೀಳುತ್ತೆ ಎಂಬ ಹೇಳಿಕೆ ನೀಡಿದ್ದಾರೆ. ಈಗಾಗಲೇ ಹಲವಾರು ಬಾರಿ ಆಪರೇಷನ್ ಗೆ ಒಳಗಾಗಿ ಕರ್ನಾಟಕದಲ್ಲಿ ಕಮಲ ಕೋಮಾದಲ್ಲಿದೆ. ಮತ್ತೆ ಆಪರೇಷನ್ ಕಮಲಕ್ಕೆ ಕೈ ಹಾಕುವ ಕೆಟ್ಟ ಸಾಹಸ ಮಾಡಬೇಡಿ. ವಿರೋಧ ಪಕ್ಷವಾಗಿ ಸದಾ ಬಿಜೆಪಿ ನಮ್ಮ ಮುಂದಿರಬೇಕು. ಇದೇ ಪ್ರಜಾಪ್ರಭುತ್ವದ ಸೌಂದರ್ಯ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಜಮಖಂಡಿಯ ವಿವಿಧೆಡೆ ರೋಡ್ ಶೋ, ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಸ್ಥಳೀಯ ನಾಯಕರೊಂದಿಗೆ ಸಭೆ ನಡೆಸಿ ಸಮಾಲೋಚನೆಯನ್ನೂ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.