Publish Date: Wed, 18 Jul 2018 (09:47 IST)
Updated Date: Wed, 18 Jul 2018 (09:48 IST)
ಬೆಂಗಳೂರು: ಶಾಸಕರಾಗಿ ತಮಗೆ ಮರು ಜನ್ಮ ನೀಡಿದ ಬಾದಾಮಿ ಕ್ಷೇತ್ರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಭೇಟಿ ನೀಡಲಿದ್ದಾರೆ.
ಇಂದಿನಿಂದ ಎರಡು ದಿನಗಳ ಕಾಲ ಸಿದ್ದರಾಮಯ್ಯ ಬಾದಾಮಿಯಲ್ಲಿ ಕಳೆಯಲಿದ್ದು, ಅಧಿಕಾರಿಗಳ ಜತೆ ಸಭೆ ನಡೆಸಿ ಜನರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಇಂದು ಸಂಜೆ ಅಧಿಕಾರಿಗಳ ಜತೆ ಸಭೆ ನಡೆಸುವ ಕಾರ್ಯಕ್ರಮವಿದ್ದು, ಬಾದಾಮಿಯ ಪ್ರವಾಸಿ ಮಂದಿರದಲ್ಲಿ ಉಳಿದುಕೊಳ್ಳಲಿದ್ದಾರೆ. ಬಳಿಕ ನಾಳೆ ಬೆಳಿಗ್ಗೆ ಇಲ್ಲಿಯೇ ಜನರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಶಾಸಕನಾದ ಮೇಲೆ ಇದು ಎರಡನೇ ಬಾರಿ ಸಿದ್ದರಾಮಯ್ಯ ಬಾದಾಮಿಗೆ ಭೇಟಿ ನೀಡುತ್ತಿದ್ದಾರೆ. ಈ ಮೊದಲು ಶಾಸಕರಾಗಿ ಆಯ್ಕೆ ಮಾಡಿದರೆ ಇಲ್ಲಿಯೇ ಕಳೆಯುವುದಾಗಿ ಹೇಳಿದ್ದರು. ಆದರೆ ಸಿದ್ದರಾಮಯ್ಯಗೆ ಇನ್ನೂ ಇಲ್ಲಿ ಮನೆ ಮಾಡಿಲ್ಲ. ಈಗಾಗಲೇ ಸಿದ್ದರಾಮಯ್ಯ ಇಲ್ಲಿ ಸೂಕ್ತ ಮನೆಗಾಗಿ ಹುಡುಕಾಟ ನಡೆಸಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.