ಬಿಜೆಪಿ ಮುತ್ಸುದ್ದಿ ಎಲ್ ಕೆ ಅಡ್ವಾಣಿಗೆ ಶುಭ ಕೋರಿದ ಸಿದ್ದರಾಮಯ್ಯ

ಶುಕ್ರವಾರ, 9 ನವೆಂಬರ್ 2018 (08:54 IST)
ಬೆಂಗಳೂರು: ಬಿಜೆಪಿಯ ಬಗ್ಗೆ ಸದಾ ಕೆಂಡ ಕಾರುವ ಕಾಂಗ್ರೆಸ್ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಎಲ್ ಕೆ ಅಡ್ವಾಣಿ ಹುಟ್ಟುಹಬ್ಬಕ್ಕೆ ಶುಭ ಕೋರಿ ಅಚ್ಚರಿ ಮೂಡಿಸಿದ್ದಾರೆ.

ನಿನ್ನೆ ಹುಟ್ಟುಹಬ್ಬ ಆಚರಿಸಿಕೊಂಡ ಎಲ್ ಕೆ ಅಡ್ವಾಣಿಗೆ ಟ್ವಿಟರ್ ಮೂಲಕ ಶುಭ ಕೋರಿದ್ದ ಸಿದ್ದರಾಮಯ್ಯ ನಿಮ್ಮಂತಹವರ ಮಾರ್ಗದರ್ಶನ ದೇಶಕ್ಕೆ ಅಗತ್ಯವಾಗಿದೆ ಎಂದಿದ್ದಾರೆ.

‘ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿಗೆ ಹುಟ್ಟುಹಬ್ಬದ ಶುಭಾಷಯಗಳು. ನೂರು ಕಾಲ ಆರೋಗ್ಯವಾಗಿ ಬಾಳಿ. ಈಗ ಅಪಾಯದಲ್ಲಿರುವ ಪ್ರಜಾಪ್ರಭುತ್ವವನ್ನು ಕಾಪಾಡಲು ನಿಮ್ಮಂತಹ ಹಿರಿಯರ ಮಾರ್ಗದರ್ಶನ ಅಗತ್ಯ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ವಿಚಿತ್ರ ಜೀವಿಯ ದಾಳಿಗೆ ಸಾವನ್ನಪ್ಪಿದ 12 ಮಂದಿ: ಗ್ರಾಮಸ್ಥರಲ್ಲಿ ಮೂಡಿದೆ ಭಯ!