Publish Date: Fri, 30 Nov 2018 (08:45 IST)
Updated Date: Fri, 30 Nov 2018 (08:50 IST)
ಬೆಂಗಳೂರು: ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ನೇಮಕಾತಿಗಳಲ್ಲಿ ಮೀಸಲಾತಿ ಕುರಿತಂತೆ ಸಿಎಂ ಕುಮಾರಸ್ವಾಮಿಗೆ ಪತ್ರ ಬರೆದಿದ್ದಾರೆ.
ಸಿಎಂ ಕುಮಾರಸ್ವಾಮಿಗೆ ಬರೆದ ಪತ್ರದಲ್ಲಿ ಸಿದ್ದರಾಮಯ್ಯ ರಾಜ್ಯದ ಸಿವಿಲ್ ಸೇವೆಗಳ ಎಲ್ಲ ವೃಂದಗಳ ನೇಮಕಾತಿಗಳಲ್ಲಿ ಮೀಸಲಾತಿ ಪಾಲನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಈ ಮೊದಲು ಹಲವು ವಿಚಾರಗಳ ಕುರಿತು ಸಿಎಂ ಕುಮಾರಸ್ವಾಮಿಗೆ ಪತ್ರ ಮುಖೇನ ಮನವಿ ಮಾಡಿದ್ದ ಸಿದ್ದರಾಮಯ್ಯ ಮತ್ತೆ ಪತ್ರ ಸಮರ ಮಾಡಿದ್ದಾರೆ. ಈ ಬಾರಿ ಸರ್ಕಾರಿ ಹಾಗೂ ಅನುದಾನಿತ ಸಂಸ್ಥೆಗಳಲ್ಲಿ ಎಸ್ಸಿ, ಎಸ್ಟಿ ಸೇರಿದಂತೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಿ ನೇಮಕ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಇತ್ತೀಚೆಗಷ್ಟೇ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗಿಂತ ಹೆಚ್ಚು ಅಂಕ ಪಡೆದ ಹಿಂದುಳಿದ ಅಭ್ಯರ್ಥಿಗಳನ್ನು ಮೀಸಲಾತಿ ವರ್ಗದಲ್ಲಿ ಪರಿಗಣಿಸಬೇಕೆಂದು ಸರ್ಕಾರ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಸೂಚಿಸಿತ್ತು. ಇದರ ವಿರುದ್ಧ ಹಿಂದುಳಿದ ವರ್ಗದ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದರು. ಈ ವಿಚಾರವನ್ನು ಇದೀಗ ಸಿದ್ದರಾಮಯ್ಯ ಸಿಎಂ ಗಮನ ಸೆಳೆದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.