Daily Horoscope
✕

ಸಿಎಂ ಕುಮಾರಸ್ವಾಮಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ

Webdunia
ಶುಕ್ರವಾರ, 30 ನವೆಂಬರ್ 2018 (08:45 IST)
ಬೆಂಗಳೂರು: ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ನೇಮಕಾತಿಗಳಲ್ಲಿ ಮೀಸಲಾತಿ ಕುರಿತಂತೆ ಸಿಎಂ ಕುಮಾರಸ್ವಾಮಿಗೆ ಪತ್ರ ಬರೆದಿದ್ದಾರೆ.

ಸಿಎಂ ಕುಮಾರಸ್ವಾಮಿಗೆ ಬರೆದ ಪತ್ರದಲ್ಲಿ ಸಿದ್ದರಾಮಯ್ಯ ರಾಜ್ಯದ ಸಿವಿಲ್ ಸೇವೆಗಳ ಎಲ್ಲ ವೃಂದಗಳ ನೇಮಕಾತಿಗಳಲ್ಲಿ ಮೀಸಲಾತಿ ಪಾಲನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಮೊದಲು ಹಲವು ವಿಚಾರಗಳ ಕುರಿತು ಸಿಎಂ ಕುಮಾರಸ್ವಾಮಿಗೆ ಪತ್ರ ಮುಖೇನ ಮನವಿ ಮಾಡಿದ್ದ ಸಿದ್ದರಾಮಯ್ಯ ಮತ್ತೆ ಪತ್ರ ಸಮರ ಮಾಡಿದ್ದಾರೆ. ಈ ಬಾರಿ ಸರ್ಕಾರಿ ಹಾಗೂ ಅನುದಾನಿತ ಸಂಸ್ಥೆಗಳಲ್ಲಿ ಎಸ್ಸಿ, ಎಸ್ಟಿ ಸೇರಿದಂತೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಿ ನೇಮಕ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಇತ್ತೀಚೆಗಷ್ಟೇ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗಿಂತ ಹೆಚ್ಚು ಅಂಕ ಪಡೆದ ಹಿಂದುಳಿದ ಅಭ್ಯರ್ಥಿಗಳನ್ನು ಮೀಸಲಾತಿ ವರ್ಗದಲ್ಲಿ ಪರಿಗಣಿಸಬೇಕೆಂದು ಸರ್ಕಾರ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಸೂಚಿಸಿತ್ತು. ಇದರ ವಿರುದ್ಧ ಹಿಂದುಳಿದ ವರ್ಗದ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದರು.  ಈ ವಿಚಾರವನ್ನು ಇದೀಗ ಸಿದ್ದರಾಮಯ್ಯ ಸಿಎಂ ಗಮನ ಸೆಳೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ನಂದಿನಿ ಹಾಲು ಬೆಲೆ ಏರಿಕೆ ಬಗ್ಗೆ ತುಟಿ ಬಿಚ್ಚಿದ ಬಿಜೆಪಿ ನಾಯಕ ಬಿವೈ ವಿಜಯೇಂದ್ರ: ಹೇಳಿದ್ದೇನು ನೋಡಿ

ಕನ್ನಡ ರಾಜ್ಯೋತ್ಸವ ನಿಮಿತ್ತ ಕನ್ನಡ ಎಚ್ ಎಂಟಿ ವಾಚ್ ಬಿಡುಗಡೆ: ಬೆಲೆ ಎಷ್ಟು, ಎಲ್ಲಿ ಖರೀದಿಸಬಹುದು ನೋಡಿ

ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಬೆಂಗಳೂರಿನಲ್ಲಿ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಇಳಿಕೆ

ಆನೆ ನಡೆವಾಗ ತೋಳ, ನರಿ ಹೋಗುವಂತೆ: ಯಡಿಯೂರಪ್ಪ, ದೇವೇಗೌಡ ಭೇಟಿ ಕುರಿತು ಹರಿಪ್ರಸಾದ್ ವ್ಯಂಗ್ಯ

ನೀ ಯಾರಾದ್ರೆ ನಂಗೇನು… ನುಂಗಿಬಿಡುತ್ತೇನೆ ಎಂದು ಮನೆಯಂಗಳಕ್ಕೆ ಬಂದಿದ್ದ ಚಿರತೆ ನೋಡಿ ನಾಯಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments