Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ಪಾಪದ ಕೊಡ ತುಂಬಿದೆ: ಕುಮಾರಸ್ವಾಮಿ

ಸಿದ್ದರಾಮಯ್ಯ ಪಾಪದ ಕೊಡ ತುಂಬಿದೆ: ಕುಮಾರಸ್ವಾಮಿ
ಬೆಂಗಳೂರು , ಭಾನುವಾರ, 25 ಜನವರಿ 2015 (11:46 IST)
ಸಿದ್ದರಾಮಯ್ಯ ಅವರ ಪಾಪದ ಕೊಡ ತುಂಬಿದೆ. ಮುಂಬರುವ ವಿಧಾನಮಂಡಲ ಅಧಿವೇಶನ ಮುಗಿದ ಬಳಿಕ ರಾಜ್ಯ ಸರ್ಕಾರದ ಭ್ರಷ್ಟಾಚಾರದ ಕುರಿತು ಜನಜಾಗೃತಿ ಮೂಡಿ ಸಲು ಬೆಳಗಾವಿಯಿಂದ ಪಾದಯಾತ್ರೆ ನಡೆಸುವುದಾಗಿ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ. 
 
ಬೆಂಗಳೂರಿನಲ್ಲಿ ನಡೆದ ಜೆಡಿಎಸ್‌ ಸಮಾವೇಶದಲ್ಲಿ ಮಾತನಾಡಿದ ಅವರು ಗಣಿ ಅಕ್ರಮದ ವಿರುದ್ಧ ಸಿದ್ದು ಬಳ್ಳಾರಿಗೆ ಪಾದಯಾತ್ರೆ ಮಾಡಿದ್ದರು. ಇದೀಗ ಇವರ ಭ್ರಷ್ಟಾಚಾರದ ವಿರುದ್ಧ ನಾನು ರಾಜ್ಯ ವ್ಯಾಪಿ ಪಾದಯಾತ್ರೆ ಮಾಡುವೆ ಎಂದಿದ್ದಾರೆ.
 
ಸಿದ್ದರಾಮಯ್ಯ ಅವರ ಪಾಪದ ಕೊಡ ತುಂಬಿದೆ ಎಂದು ಗುಡುಗಿರುವ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಬರುವ ವಿಧಾನಮಂಡಲ ಅಧಿವೇಶನ ಮುಗಿದ ಬಳಿಕ ರಾಜ್ಯ ಸರ್ಕಾರದ ಭ್ರಷ್ಟಾಚಾರದ ಕುರಿತು ಜನಜಾಗೃತಿ ಮೂಡಿಸಲು ಬೆಳಗಾವಿಯಿಂದ ಪಾದಯಾತ್ರೆ ನಡೆಸುವುದಾಗಿ ಘೋಷಿಸಿದ್ದಾರೆ.
 
"ಬಿಜೆಪಿ ಸರ್ಕಾರದ ಅವಧಿಯಲ್ಲಿ ಗಣಿ ಅಕ್ರಮದ ವಿರುದ್ಧ ಸಿದ್ದರಾಮಯ್ಯ ಬಳ್ಳಾರಿಗೆ ಪಾದಯಾತ್ರೆ ಮಾಡಿದ್ದರು. ಇದೀಗ ಇವರ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ನಾನು ಬೆಳಗಾವಿಯಿಂದ ರಾಜ್ಯವ್ಯಾಪಿ ಪಾದಯಾತ್ರೆ ನಡೆಸುತ್ತೇನೆ' ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
 
ಈಗಾಗಲೇ ಅಧಿಕೃತ ಪ್ರತಿಪಕ್ಷ ಬಿಜೆಪಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಹೋರಾಟ ಆರಂಭಿಸಿದೆ. ಇದೀಗ ಜೆಡಿಎಸ್‌ ಕೂಡ ಕಾಂಗ್ರೆಸ್‌ ಸರ್ಕಾರದ ವಿರುದ್ಧ ನೇರ ಸಮರ ಸಾರಿದಂತಾಗಿದೆ.
 
ಶನಿವಾರ ನಗರದ ಅರಮನೆ ಮೈದಾನದಲ್ಲಿ ನಡೆದ ಜೆಡಿಎಸ್‌ ಸಮಾವೇಶ ಹಾಗೂ ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿದಾಗ ಒಂದೆರಡು ಬಾರಿ ಸಿದ್ದರಾಮಯ್ಯ ಬಗ್ಗೆ ಮೃಧು ಧೋರಣೆ ತಾಳಿದ್ದು ನಿಜ. ಆದರೆ, ಇನ್ನು ಮುಂದೆ ಅದು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರ ಪಾಪದ ಕೊಡ ತುಂಬಿದೆ, ಈ ಸರ್ಕಾರ ನಡೆಸಿರುವ ಭ್ರಷ್ಟಾಚಾರವನ್ನು ದಾಖಲೆಗಳ ಸಮೇತ ಜನರ ಮುಂದಿಡುತ್ತೇನೆ ಎಂದು ಹೇಳಿದರು.
 
ಅರ್ಕಾವತಿ ಡಿನೋಟಿಫಿಕೇಷನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ "ರೀಡು' ಮಾಡುವ ಮುನ್ನ ಎನ್‌ಓಸಿ ನೀಡಿದ ಬಗ್ಗೆ ಸಿದ್ದರಾಮಯ್ಯ ಮೌನ ವಹಿಸಿರುವುದೇ ಭ್ರಷ್ಟಾಚಾರ ನಡೆದಿದೆ ಎಂಬುದಕ್ಕೆ ಸಾಕ್ಷಿ. ಈ ಹಿಂದೆ ತಮ್ಮನ್ನು ರಕ್ಷಿಸಿಕೊಳ್ಳಲು ಆಪ್ತರ
 
ಎಸ್‌ಪಿಜಿ (ಸ್ಪೆಷಲ್‌ ಪ್ರೊಟೆಕ್ಷನ್‌ ಗ್ರೂಪ್‌) ರಚಿಸಿಕೊಂಡಿದ್ದ ಸಿದ್ದರಾಮಯ್ಯ ಇದೀಗ ಮಂತ್ರಿಗಳನ್ನೂ ಒಳಗೊಂಡಂತೆ ಆಪ್ತರ ಆರ್‌ಎಎಫ್ (ರ್ಯಾಪಿಡ್‌ ಆ್ಯಕ್ಷನ್‌ ಫೋರ್ಸ್‌) ರಚಿಸಿಕೊಂಡಿದ್ದಾರೆ. ಇಷ್ಟಾದರೂ ಉಳಿಯುವುದು ಕಷ್ಟ ಎಂದು ಹೇಳಿದರು.
 
ಸಿದ್ದರಾಮಯ್ಯ ಜೆಡಿಎಸ್‌ನಲ್ಲಿದ್ದಾಗ ಹುಲಿಯಾಗಿದ್ದರು. ಈಗ ಇಲಿಯಾಗಿದ್ದಾರೆ. ಇಲ್ಲಿ ಮುಖ್ಯಮಂತ್ರಿಯಾಗದಿದ್ದರೂ ಅವರಿಗಿದ್ದ ಗತ್ತು ಕಾಂಗ್ರೆಸ್‌ನಲ್ಲಿ ಮಾಯವಾಗಿದೆ. ಮಾತಿಗೆ ಮುಂಚೆ ನಾನು ಪ್ರಾಮಾಣಿಕ ಎಂದು ಹೇಳುತ್ತಿದ್ದವರ ಧ್ವನಿ ಅಡಗಿದೆ. ಜೆಡಿಎಸ್‌ನಲ್ಲಿ ಸ್ವತ್ಛವಾಗಿದ್ದವರು ಅಲ್ಲಿ ಹೋಗಿ ಭ್ರಷ್ಟಾಚಾರಿಯಾಗಿದ್ದಾರೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಕಳೆದುಕೊಂಡಿದ್ದಾರೆ ಎಂದು ಕುಮಾರಸ್ವಾಮಿ ವಾಗ್ಧಾಳಿ ನಡೆಸಿದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರೈತರ ಬಗ್ಗೆ ಕಳಕಳಿ ಇಲ್ಲ. ರೈತರು ಬೆಳೆದ ಬೆಳೆಗೆ ಬೆಲೆ ಸಿಗದೆ ಕಂಗಾಲಾಗಿದ್ದರೂ ಅವರ ನೆರವಿಗೆ ಧಾವಿಸದ ಈ ಸರ್ಕಾರ ಹೋಗುವುದೇ ಸೂಕ್ತ. ರೈತರಿಗಾಗಿ ನಾಲ್ಕೈದು ಸಾವಿರ ಕೋಟಿ ರೂ. ಪ್ಯಾಕೇಜ್‌ ಘೋಷಿಸಲು ಯೋಗ್ಯತೆ ಇಲ್ಲದ ಮೇಲೆ ಸರ್ಕಾರ ಯಾಕೆ ಇರಬೇಕು ಎಂದು ಖಾರವಾಗಿ ಪ್ರಶ್ನಿಸಿದರು.
 
ಅರ್ಕಾವತಿ ಡಿ ನೋಟಿಫಿಕೇಷನ್‌ ಪ್ರಕರಣದಲ್ಲಿ ಗೌರ್ನರ್‌ ಸಾಹೇಬರು ಕೈಗೊಳ್ಳುವ ತೀರ್ಮಾನದ ನಂತರ ಸಿದ್ದರಾಮಯ್ಯ ಹಣೆಬರಹ ಗೊತ್ತಾಗಲಿದೆ. ಅಲ್ಲಿವರೆಗೂ ಕಾಯೋಣ. ರಾಜ್ಯದ ಜನತೆಗೆ ಹಲವಾರು ಭಾಗ್ಯಗಳನ್ನು ಕರುಣಿಸಿರುವ ಸಿದ್ದರಾಮಯ್ಯ ಅವರು ಮುಂದೆ ಕಾಂಗ್ರೆಸ್‌ಗೆ ಯಾವ ದೌರ್ಭಾಗ್ಯ ಕರುಣಿಸುತ್ತಾರೋ ಆ ದೇವರೇ ಬಲ್ಲ ಎಂದು ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 

Share this Story:

Follow Webdunia kannada