Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯರಿಂದ ತುಘಲಕ್ ದರ್ಬಾರ್ ನಡೆಯುತ್ತಿದೆ: ಯಡ್ಡಿ ಕಿಡಿ

Webdunia
ಶನಿವಾರ, 20 ಫೆಬ್ರವರಿ 2016 (16:38 IST)
ಕೇಂದ್ರ ಸರಕಾರ ರಾಜ್ಯಕ್ಕೆ ಆರ್ಥಿಕ ಅನುದಾನ ಬಿಡುಗಡೆಗೊಳಿಸಿದ್ದರೂ ರಾಜ್ಯ ಸರಕಾರ ಅದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಯ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಬೀದಿಗಳಿದು ಹೋರಾಟ ಮಾಡಲಿದೆ ಎಂದು ಎಚ್ಚರಿಸಿದ್ದಾರೆ.
 
ಬರಪೀಡಿತ ಜಿಲ್ಲೆಗಳಲ್ಲಿ ರೈತರು ಕಂಗಾಲಾಗಿದ್ದಾರೆ. ರಾಜ್ಯ ಸರಕಾರ ರೈತರ ಕಷ್ಟಗಳಿಗೆ ಕವಡೆ ಕಾಸಿನ ಕಿಮ್ಮತ್ತು ಕೊಡುತ್ತಿಲ್ಲ. ರೈತರಿಗೆ ಹಣಕಾಸಿನ ನೆರವು ನೀಡುವುದಾಗಿ ಘೋಷಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ಕಾರ್ಯನಿರ್ವಹಣೆಯಲ್ಲಿ ವಿಫಲವಾಗಿದ್ದಾರೆ ಎಂದು ಗುಡುಗಿದರು.
 
ರಾಜ್ಯದಲ್ಲಿ 1240 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದರಲ್ಲಿ ಕೇವಲ 209 ರೈತರಿಗೆ ಮಾತ್ರ ಪರಿಹಾರ ಧನ ವಿತರಣೆಯಾಗಿದೆ. ರಾಜ್ಯ ಸರಕಾರ ಕೇಂದ್ರದ ಅನುದಾನ ಸರಿಯಾಗಿ ಬಳಸಿಕೊಳ್ಳುವಲ್ಲಿ ವಿಫಲವಾಗಿದೆ ಎಂದರು. 
 
ಜಿಲ್ಲಾಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಬಿಜೆಪಿ ಪಕ್ಷ ಅತಿ ಹೆಚ್ಚಿನ ಸ್ಥಾನಗಳಿಸುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments