Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯರಿಂದ ಸರಕಾರಿ ನೌಕರರಿಗೆ ಬಂಪರ್ ಕೊಡುಗೆ

ಸಿಎಂ ಸಿದ್ದರಾಮಯ್ಯರಿಂದ ಸರಕಾರಿ ನೌಕರರಿಗೆ ಬಂಪರ್ ಕೊಡುಗೆ
, ಶುಕ್ರವಾರ, 24 ಏಪ್ರಿಲ್ 2015 (20:24 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಸರಕಾರಿ ಉದ್ಯೋಗಿಗಳ ತುಟ್ಟಿಭತ್ಯೆ ಶೇ. 3.5ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಪ್ರಸಕ್ತ ಸಾಲಿನ ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಇದು ಜಾರಿಗೆ ಬರಲಿದೆ. ನೌಕರರಿಗೆ ಪ್ರಸ್ತುತ ಶೇಕಡಾ 25.25ರಷ್ಟು ತುಟ್ಟಿಭತ್ಯೆ ನೀಡಲಾಗುತ್ತಿತ್ತು. ಈಗ ಅದು ಶೇಕಡಾ 28.75ಕ್ಕೆ ಏರಿದೆ.

ಮೇ 30ರೊಳಗೆ ಬೃಹತ್ ಮಹಾನಗರ ಪಾಲಿಕೆಗೆ ಚುನಾವಣೆ ನಡೆಸಬೇಕು ಎಂಬ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶವನ್ನು ಇಂದು ಹೈಕೋರ್ಟ್ ವಿಭಾಗೀಯ ಪೀಠ ರದ್ದುಗೊಳಿಸಿತ್ತು. ಇದರಿಂದ ಸರ್ಕಾರಕ್ಕೆ ಚುನಾವಣೆ ನಡೆಸಲು ಆರು ತಿಂಗಳ ಕಾಲವಕಾಶ ಸಿಕ್ಕಂತಾಗಿದ್ದು, ಇದರ ನಡುವೆ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ ಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

Share this Story:

Follow Webdunia kannada