ಬೆಂಗಳೂರಿನಲ್ಲಿ ಭಾರತೀಯ ಸೇನೆ ವಿರುದ್ಧ ಆಕ್ಷೇಪಾರ್ಹ ಘೋಷಣೆ ಕೂಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರಕಾರ ದೇಶದ್ರೋಹಿ ವಿರುದ್ಧದ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಮ್ನೆಸ್ಟಿ ಇಂಡಿಯಾ ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿಯಿಂದ ಪುರಭವನದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಇದು ತಲೆ ಕೆಟ್ಟ ಸರಕಾರ ಎಂದು ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ವಿರುದ್ಧ ಕಿಡಿ ಕಾರಿದರು.
ದೇಶದ್ರೋಹ ಘೋಷಣೆ ಕೂಗಿರುವದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಚ್ ಮಾಡಿಸುವ ಮೂಲಕ ದೌರ್ಜನ್ಯ ಎಸಗಿದ್ದಾರೆ. ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಇಂಡಿಯಾ ಸಂಸ್ಥೆ 'ಬ್ರೋಕನ್ ಫ್ಯಾಮಿಲೀಸ್' ಹೆಸರಿನಲ್ಲಿ ನಡೆಸಿದ್ದ ಕಾರ್ಯಾಗಾರದಲ್ಲಿ ಕಾಶ್ಮೀರಿಗಳಿಗೆ ಭಾರತೀಯ ಸೇನೆಯಿಂದ ಮುಕ್ತಿ ನೀಡಬೇಕು ಎಂದು ಕೆಲವರು ಸೇನೆಯ ವಿರುದ್ಧ ಆಕ್ಷೇಪಾರ್ಹ ಘೋಷಣೆಯನ್ನು ಕೂಗಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ