Select Your Language

Notifications

webdunia
webdunia
webdunia
webdunia

ಯಡಿಯೂರಪ್ಪ ಹೇಳಿಕೆಯಿಂದ ಬ್ಯಾಲನ್ಸ್ ಕಳೆದುಕೊಂಡ ಸಿದ್ದರಾಮಯ್ಯ: ಶೋಭಾ ಕರಂದ್ಲಾಜೆ

ಯಡಿಯೂರಪ್ಪ ಹೇಳಿಕೆಯಿಂದ ಬ್ಯಾಲನ್ಸ್ ಕಳೆದುಕೊಂಡ ಸಿದ್ದರಾಮಯ್ಯ: ಶೋಭಾ ಕರಂದ್ಲಾಜೆ
ಉಡುಪಿ , ಬುಧವಾರ, 21 ಡಿಸೆಂಬರ್ 2016 (20:03 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿಕೆಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ಯಾಲನ್ಸ್ ಕಳೆದುಕೊಂಡಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದ್ದಾರೆ.
 
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ತಮ್ಮ ಎಲ್ಲಾ ಸರಕಾರಿ ಕಾರ್ಯಕ್ರಮಗಳನ್ನು ಬಿಟ್ಟು ಬೆಂಗಳೂರಿನಲ್ಲಿಯೇ ಇರುತ್ತಾರೆ. ತಮ್ಮ ಸಂಪುಟದ ಮಂತ್ರಿಗಳ ಭ್ರಷ್ಟಾಚಾರದ ಕುರಿತು ಅವರಿಗೆ ಅರಿವಿದೆ ಎಂದು ಆರೋಪಿಸಿದ್ದಾರೆ.
 
ಐಟಿ ಅಧಿಕಾರಿಗಳ ಬಲೆಗೆ ಬಿದ್ದಿದ್ದ ಜಯಚಂದ್ರ ತನಿಖೆಯ ಬಳಿಕ ಕಾಂಗ್ರೆಸ್ ಶಾಸಕರಿಗೆ ನಡುಕ ಶುರುವಾಗಿದೆ. ಸದ್ಯದಲ್ಲಿಯೇ ಅವರ ಬಣ್ಣ ಬಯಲಾಗಲಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಕಾಂಗ್ರೆಸ್ ಹೈಕಮಾಂಡ್‌ಗೆ ಕಪ್ಪು ಕಾಣಿಕೆ ನೀಡುತ್ತಿದೆ ಎಂದು ಆರೋಪಿಸಿದರು. 
 
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೊಸ ಬಾಂಬ್ ಕುರಿತು ಪ್ರತಿಕ್ರಿಯೆ ನೀಡಿರುವ ಶೋಭಾ ಕರಂದ್ಲಾಜೆ, ಕಂಪನ ರಾಹುಲ್ ಗಾಂಧಿ ಮನೆಯಿಂದಲೇ ಶುರುವಾಗಲಿದೆ. ಸದ್ಯದಲ್ಲಿಯೇ ಅವರ ಮನೆಯಲ್ಲಿ ಬಾಂಬ್ ಸಿಡಿಯುತ್ತೆ ಎಂದು ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಜಾರಿ: ಸಿಎಂ ವಿಷಾದ