ಮೀಸಲು ಸೌಲಭ್ಯ ಕಲ್ಪಿಸದೆ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಿದ್ರೆ, ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತದೆ ಎಂದು, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ಕಲ್ಪಿಸುವ ಸಂಬಂಧ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ, ನಡೆದ ವಿಧಾನ ಮಂಡಲದ ಉಭಯ ಸದನ ನಾಯಕರ ಸಭೆಯಲ್ಲಿ ಭಾಗವಹಿಸಿ ಬಳಿಕ ಹೇಳಿಕೆ ನೀಡಿದ್ದಾರೆ.