Publish Date: Thu, 16 May 2019 (14:15 IST)
Updated Date: Thu, 16 May 2019 (14:42 IST)
ಬೆಂಗಳೂರು : ಕೆಲಸ ಮಾಡಲು ಆಗದಿದ್ದರೇ ಕೈಗೆ ಬಳೆ ತೊಟ್ಟುಕೊಳ್ಳಿ ಎಂದು ಕಿಡಿಕಾರಿದ್ದ ಸಂಸದೆ ಶೋಭಾ ಕರಂದ್ಲಾಜೆಗೆ ಸಿದ್ದರಾಮಯ್ಯ ಇದೀಗ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಸಿದ್ದರಾಮಯ್ಯ ಟ್ವಿಟ್ ಮಾಡಿ, ಕುಮಾರಿ ಶೋಭಾ ಕರಂದ್ಲಾಜೆಯವರೇ, ಓರ್ವ ಹೆಣ್ಣಾಗಿ ತಾವು ಮಹಿಳಾ ಸಂಕುಲವೇ ಅಸಮರ್ಥರು ಎಂಬಂತೆ ಕೀಳು ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.
ಜೊತೆಗೆ ಸಂಸದರಾಗಿ ತಾವೊಬ್ಬರು ಸರಿಯಾಗಿ ಕೆಲಸ ಮಾಡಿಲ್ಲ ಎಂಬ ಮಾತ್ರಕ್ಕೆ ಬಳೆ ತೊಟ್ಟವರೆಲ್ಲ ಕೆಲಸ ಮಾಡಲಾಗದವರು ಎಂದಲ್ಲ. ನೆನಪಿರಲಿ, ಚೆನ್ನಮ್ಮ, ಓಬವ್ವ, ಇಂದಿರಾಗಾಂಧಿ ಇವರೆಲ್ಲ ಬಳೆ ತೊಟ್ಟೆ ಸಾಧನೆಯ ಉತ್ತುಗಂಕ್ಕೆ ಏರಿದವರು ಎಂದು ಶೋಭಾ ಕರಂದ್ಲಾಜೆ ಮಾತಿಗೆ ತಿರುಗೇಟು ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.