Publish Date: Fri, 16 Mar 2018 (06:47 IST)
Updated Date: Fri, 16 Mar 2018 (06:50 IST)
ಬೆಂಗಳೂರು : ವೇದಿಕೆಗಳಲ್ಲಿ ಯಡಿಯೂರಪ್ಪ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಬಾರದು ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಇತರೆ ಕಾಂಗ್ರೆಸ್ ಮುಖಂಡರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯುರಪ್ಪ ಅವರು ವೇದಿಕೆಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರು ನನ್ನ ಬಗ್ಗೆ ಅವಹೇಳನ ಮಾಡುತ್ತಾರೆ. ಅವರು ಈ ರೀತಿಯಾಗಿ ಹೇಳಿಕೆಗಳನ್ನು ನೀಡಬಾರದು ಎಂದು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿರುವ ಹಿನ್ನಲೆಯಲ್ಲಿ ಅರ್ಜಿಯ ವಿಚಾರಣೆ ಮಾಡಿದ ನ್ಯಾಯಮೂರ್ತಿ ನರೇಂದ್ರ ಅವರು ಸಿಎಂ ಹಾಗೂ ದಿನೇಶ್ ಗುಂಡೂರಾವ್, ಉಗ್ರಪ್ಪ ಸೇರಿದಂತೆ ಇತರೆ ಕಾಂಗ್ರೆಸ್ ಮುಖಂಡರ ವಿರುದ್ದ ತುರ್ತು ನೋಟಿಸ್ ಜಾರಿ ಮಾಡಿದ್ದಾರೆ.
ಇದರ ಪ್ರಕಾರ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣಗಳ ಬಗ್ಗೆ ಹಾಗೂ ವೈಯಕ್ತಿಕ ವಿಚಾರಗಳ ಬಗ್ಗೆ ಮಾಧ್ಯಮಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮಾತನಾಡಬಾರದು ಎಂದು ನಿರ್ಬಂಧ ಹೇರಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ