Publish Date: Fri, 16 Mar 2018 (12:48 IST)
Updated Date: Fri, 16 Mar 2018 (12:51 IST)
ಬೆಂಗಳೂರು : ಕಾಂಗ್ರೆಸ್ ಟಿಕೆಟ್ ಬಗ್ಗೆ ವೀರಪ್ಪ ಮೊಯ್ಲಿ ಅವರ ಟ್ವೀಟ್ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಕೆಂಡಮಂಡಲವಾಗಿದ್ದಾರೆ.
ಟಿಕೆಟ್ ಹಂಚಿಕೆ ವಿಚಾರ ಪಕ್ಷದ ವೇದಿಕೆಯಲ್ಲಿ ಚರ್ಚಿಸಬೇಕಿತ್ತು. ಬಹಿರಂಗವಾಗಿ ಟಿಕೆಟ್ ವಿಚಾರ ಚರ್ಚೆ ಮಾಡಿರುವುದು ತಪ್ಪು ಎಂದು ಮೊಯ್ಲಿ ಅವರ ವಿರುದ್ದ ಹೈಕಮಾಂಡ್ ಗೆ ದೂರು ನೀಡಲು ಸಿಎಂ ನಿರ್ಧಾರ ಮಾಡಿದ್ದಾರೆ. ಹಾಗೇ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರಿಗೆ ಬೆಳಿಗ್ಗೆ ದೂರವಾಣಿ ಕರೆ ಮಾಡಿ ಅಸಮಾಧಾನ ವ್ಯಕ್ತಪಡಿಸಿರುವುದರ ಜೊತೆಗೆ ಚರ್ಚೆ ಕೂಡ ನಡೆಸಿ ಎಐಸಿಸಿ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ನಡೆಸುವಂತೆ ಸೂಚನೆ ನೀಡಿದ್ದಾರೆ. ಪಕ್ಷ ಮತ್ತು ಸರ್ಕಾರದ ವಿರುದ್ದ ನಾಯಕರ ಬಹಿರಂಗ ಹೇಳಿಕೆಗೆ ಕಡಿವಾಣ ಹಾಕುವಂತೆ ಕೆ.ಸಿ.ವೇಣುಗೋಪಾಲ್ ಗೆ ತಿಳಿಸಿರುವುದಾಗಿ ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ