Publish Date: Tue, 11 Dec 2018 (16:03 IST)
Updated Date: Tue, 11 Dec 2018 (16:04 IST)
ಬೆಂಗಳೂರು : ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದರ ಕುರಿತು ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿದ್ದಾರೆ.
ಪಂಚರಾಜ್ಯ ಚುನಾವಣೆಯ ಫಲಿತಾಂಶಗಳ ಪೈಕಿ ಕಾಂಗ್ರೆಸ್ ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ಬಹುಮತದತ್ತ ಮುನ್ನುಗ್ಗುತ್ತಿದೆ. ಅಲ್ಲದೇ ಛತ್ತೀಸಗಢದಲ್ಲಿ ಸ್ಪಷ್ಟ ಮುನ್ನಡೆಯನ್ನು ಪಡೆದಿದೆ. ಈ ಕುರಿತು ಸಿದ್ದರಾಮಯ್ಯ ಟ್ವೀಟ್ ಮಾಡಿ ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ ಎಂದು ಹೇಳಿದ್ದಾರೆ.
‘ಪ್ರಚಾರದ ಗಾಳಿಪಟಗಳು ನೆಲಕ್ಕುರುಳುತ್ತಿವೆ. ಇದು ಗೆದ್ದು ಬೀಗುವ ಸಮಯವಲ್ಲ. ಸೈದ್ಧಾಂತಿಕವಾಗಿ ಗಟ್ಟಿಕೊಂಡು ನೆಲದಲ್ಲಿ ಕಾಲೂರಿ ಹೋರಾಟದಲ್ಲಿ ತೊಡಬೇಕಾದ ಕಾಲ ಎಂದು ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.