Publish Date: Fri, 17 May 2019 (15:10 IST)
Updated Date: Fri, 17 May 2019 (15:12 IST)
ಬೆಂಗಳೂರು : ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ದೇಶ ಪ್ರೇಮಿ ಎಂದ ಸಾಧ್ವಿ ಪ್ರಜ್ಞಾ ಸಿಂಗ್ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ಪ್ರಚಾರದ ವೇಳೆ ನಾಥೂರಾಮ್ ಗೋಡ್ಸೆ ದೇಶಭಕ್ತ. ಜನರ ಮನಸ್ಸಿನಲ್ಲಿ ದೇಶಭಕ್ತನಾಗಿಯೇ ಉಳಿಯಲಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಬಗ್ಗೆ ಬಾರೀ ವಿರೋಧ ವ್ಯಕ್ತವಾಗಿತ್ತು.
ಇದೀಗ ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸಂಘ ಪರಿವಾರ ಸಿದ್ದಾಂತಗಳಿಂದ ಗೋಡ್ಸೆ ಸ್ಪೂರ್ತಿ ಪಡೆದಿದ್ದ. ಈಗ ಸಾಧ್ವಿ ಪ್ರಜ್ಞಾ ಸಿಂಗ್ ಕೂಡ ಹಾಗೆಯೇ. ಗೋಡ್ಸೆ ಗಾಂಧಿಯನ್ನು ಕೊಂದ. ಇವರು ಅವರ ಮಕ್ಕಳನ್ನು ಕೊಂದರು. ಗೋಡ್ಸೆಯನ್ನು ದೇಶಭಕ್ತ ಎನ್ನುವ ಸಾಧ್ವಿ ನರೇಂದ್ರ ಮೋದಿಯಿಂದ ಅನುಮೋದನೆ ಪಡೆದುಕೊಂಡಿದ್ದಾರೆ. ಇದು ಸಂಘ ಪರಿವಾರದ ದ್ವೇಷ ಸಿದ್ದಾಂತವನ್ನು ವಿಸ್ತರಿಸುವ ಸೂಚನೆಯೇ? ಎಂದು ಪ್ರಶ್ನಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.