ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

Krishnaveni K
ಶುಕ್ರವಾರ, 21 ನವೆಂಬರ್ 2025 (14:01 IST)
ಬೆಂಗಳೂರು: ಕೃಷಿ ಸಚಿವರು ದೆಹಲಿಗೆ ಹೋಗಿದ್ದಾರೆ ಎಂದ ಮಾತ್ರಕ್ಕೆ ನಾಯಕತ್ವ ಬದಲಾವಣೆ ವಿಷಯಕ್ಕೆ ಅಂತಾನಾ? ಏನೋ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ ಎಂದು ಸಿದ್ದರಾಮಯ್ಯ ಇಂದು ಮಾಧ್ಯಮಗಳ ಮೇಲೆಯೇ ಗರಂ ಆಗಿದ್ದಾರೆ.

ರಾಜ್ಯ ಸರ್ಕಾರಕ್ಕೆ ಎರಡೂವರೆ ವರ್ಷ ಪೂರೈಸಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಂಚಿಕೆ ವಿಚಾರ ಭಾರೀ ಸದ್ದು ಮಾಡುತ್ತಿದೆ. ಇದರ ನಡುವೆ ಡಿಕೆ ಶಿವಕುಮಾರ್ ಬೆಂಬಲಿಗ ಶಾಸಕರು ದೆಹಲಿಗೆ ತೆರಳಿದ್ದು ಹೈಕಮಾಂಡ್ ಭೇಟಿಗೆ ಯತ್ನಿಸುತ್ತಿದೆ ಎಂಬ ಸುದ್ದಿಗಳಿವೆ. ಇದಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿಯೇ ನೇತೃತ್ವ ವಹಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಇದರ ಬಗ್ಗೆ ಇಂದು ಮಾಧ್ಯಮಗಳಿಗೆ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ. ‘ಕೃಷಿ ಸಚಿವರ ಜೊತೆ ನಾನು ನಿನ್ನೆ ಮಾತನಾಡಿದ್ದೆ. ಈವತ್ತೂ ವಿಡಿಯೋ ಕಾನ್ಫರೆನ್ಸ್ ಮಾಡಿದ್ದೆ. ಅವರೇನೋ ದೆಹಲಿಗೆ ಕೇಂದ್ರ ಕೃಷಿ ಸಚಿವರ ಭೇಟಿಗೆ ಹೋಗಿದ್ದೆ ಎಂದಿದ್ದಾರೆ. ಯಾವ ಶಾಸಕರು ಬೇಕಾದರೂ ದೆಹಲಿಗೆ ಹೋಗಲಿ ಹೈಕಮಾಂಡ್ ಭೇಟಿ ಮಾಡಲಿ. ಅದು ನಾಯಕತ್ವ ಬದಲಾವಣೆಗೇ ಅಂತೇನೂ ಅಲ್ಲ.

ಏನು ಬದಲಾವಣೆ ಮಾಡಬೇಕೆಂದಿದ್ದರೂ ಹೈಕಮಾಂಡ್ ತೀರ್ಮಾನಿಸಬೇಕು. ಹೈಕಮಾಂಡ್ ನವರು ಏನಾದ್ರೂ ನಾಯಕತ್ವ ಬದಲಾವಣೆ ಆಗುತ್ತೆ ಎಂದಿದ್ದಾರಾ?’ ಎಂದು ಮಾಧ್ಯಮಗಳಿಗೆ ಪ್ರಶ್ನೆ ಮಾಡಿದ್ದಾರೆ.

ಇನ್ನು, ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡುವ ಬಗ್ಗೆಯೂ ಸಿಎಂ ಮಾತನಾಡಿದ್ದಾರೆ. ಖರ್ಗೆಯವರೇ ಇಂದು ಬೆಂಗಳೂರಿಗೆ ಬರ್ತಿದ್ದಾರೆ. ನಾಳೆ ಅವರನ್ನು ಭೇಟಿ ಮಾಡಿ ಚರ್ಚೆ ಮಾಡ್ತೀನಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವೇಗೌಡರ ಮಕ್ಕಳು ನನ್ನ ಸಿಎಂ ಆಗಲು ಬಿಡ್ತಿರಲಿಲ್ಲ ಎಂದಿದ್ದ ಸಿದ್ದರಾಮಯ್ಯಗೆ ಜೆಡಿಎಸ್ ತಿರುಗೇಟು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮನುಷ್ಯನ ಆರೋಗ್ಯಕ್ಕೆ ಮುಖ್ಯವಾಗಿ ಬೇಕಾಗಿದ್ದು ಇದೇ ಅಂತಾರೆ ಡಾ ಸಿಎನ್ ಮಂಜುನಾಥ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೊನೆಗೂ ಅರೆಸ್ಟ್ ಆದ ಬೆಂಗಳೂರು ದರೋಡೆಕೋರರು: ಎಷ್ಟು ಹಣ ಸಿಕ್ತು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments