Publish Date: Fri, 26 Jan 2018 (17:28 IST)
Updated Date: Fri, 26 Jan 2018 (17:32 IST)
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗೆ ಯಶಸ್ವಿಯಾಗಿ ಸ್ಟೆಂಟ್ ಅಳವಡಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.
ಇಂದು ಬೆಳಿಗ್ಗೆ ಆಸ್ಪತ್ರೆಗೆ ದಾಖಲಾಗಿದ್ದ ಸ್ವಾಮೀಜಿಗೆ ಅನ್ನ ನಾಳದ ಸಮಸ್ಯೆ ಇತ್ತು ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಡಾ. ರವೀಂದ್ರ ನೇತೃತ್ವದಲ್ಲಿ ಶತಾಯುಷಿ ಶ್ರೀಗಳಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬೆಳಿಗ್ಗೆಯಿಂದಲೇ ಶ್ರೀಗಳ ಅನಾರೋಗ್ಯದ ಸುದ್ದಿ ಕೇಳಿ ಭಕ್ತರು ಆತಂಕಗೊಳಗಾಗಿದ್ದರು. ಇದೀಗ ಚೇತರಿಸಿಕೊಳ್ಳುತ್ತಿದ್ದಾರೆಂಬ ಸುದ್ದಿಯನ್ನು ಸ್ವತಃ ಸಿದ್ಧಗಂಗಾ ಮಠದ ಕಿರಿಯ ಶ್ರೀಗಳು ಹಾಗೂ ಬಿಜಿಎಸ್ ಆಸ್ಪತ್ರೆಯ ವೈದ್ಯರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಆದರೆ ಇಂದು ಶ್ರೀಗಳನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದಿಲ್ಲ ಎಂದು ವೈದ್ಯರು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ