Publish Date: Wed, 31 Jul 2019 (09:55 IST)
Updated Date: Wed, 31 Jul 2019 (09:57 IST)
ಚಿಕ್ಕಮಗಳೂರು : ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಅಳಿಯ ಕೆಫೆ ಕಾಫಿ ಡೇ ಸಂಸ್ಥಾಪಕ ವಿ.ಜಿ ಸಿದ್ದಾರ್ಥ್ ಅವರ ಅಂತ್ಯಕ್ರಿಯೆಯು ಚಿಕ್ಕಮಗಳೂರಿನಲ್ಲಿ ಮಧ್ಯಾಹ್ನದ ವೇಳೆಗೆ ನಡೆಯಲಿರುವುದಾಗಿ ತಿಳಿದುಬಂದಿದೆ.
ಸಿದ್ದಾರ್ಥ್ ಅವರ ಮೃತದೇಹ ನೇತ್ರಾವತಿ ನದಿ ಹಿನ್ನೀರು ಪ್ರದೇಶದಲ್ಲಿ ಪತ್ತೆಯಾಗಿದ್ದು, ವೆನ್ ಲಾಕ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕಾಫಿ ಕಿಂಗ್ ಸಿದ್ದಾರ್ಥ್ ಅವರ ಪಾರ್ಥಿವ ಶರೀರವನ್ನು 11 ಗಂಟೆಗೆ ಸುಮಾರಿಗೆ ಚಿಕ್ಕಮಗಳೂರಿಗೆ ರವಾನೆ ಮಾಡಲಾಗುತ್ತಿದೆ.
ಬೇಲೂರು ಚೇತನಹಳ್ಳಿಯ ಸಿದ್ಧಾರ್ಥ್ ಕಾಫಿ ಎಸ್ಟೇಟ್ ಹಾಗೂ ಎಬಿಸಿ ಕಾಫಿ ಕ್ಯೂರಿಂಗ್ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ನೌಕರರು ಹಾಗೂ ಕುಟುಂಬಸ್ಥರ ಅಂತಿಮ ದರ್ಶನದ ಬಳಿಕ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರುವ ಸಾಧ್ಯೆತೆಗಳಿವೆ ಎನ್ನಲಾಗಿದೆ.