Select Your Language

Notifications

webdunia
webdunia
webdunia
Thursday, 10 April 2025
webdunia

ಕಾಂಗ್ರೆಸ್ ಬಿಟ್ಟವರನ್ನು ಸೇರಿಸಿಕೊಳ್ಳಲ್ಲ ಮಾಜಿ ಸಿಎಂ ಸಿದ್ದರಾಮಯ್ಯ

Corona
ಬೆಂಗಳೂರು , ಬುಧವಾರ, 26 ಜನವರಿ 2022 (17:00 IST)
ಬಿಜೆಪಿಯ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಸಿದ್ದು ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿ ಸಿದೆ. ಈ ಸಂಬಂಧ ಸ್ವತಹ ಸಿದ್ದರಾಮಯ್ಯ ಅವರೇ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಬಂದವರಿಗೆ ಸ್ವಾಗತ ಅಂತ ನಾನು ಹೇಳಿದ್ದು, ಕಾಂಗ್ರೆಸ್ ಬಿಟ್ಟು ಹೋದವರನ್ನು ಸೇರಿಸಿಕೊಳ್ಳತ್ತೇನೆ ಎಂದು ಎಲ್ಲೂ ಹೇಳಿಲ್ಲ.
ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಟ್ಟವರನ್ನು ಸೇರಿಸಿಕೊಳ್ಳುವುದಿಲ್ಲ ಎಂದು ಹೇಳಿದರು. ನಾನು ನಾನಾಗಿ ಯಾರ ನ್ನೂ ಆಹ್ವಾನಿಸಲ್ಲ, ಅವರಾಗಿ ಬಂದರೆ ಮಾತ್ರ ಸ್ವಾಗತ ಮಾಡುತ್ತೇವೆ ಎಂದು ತಿಳಿಸಿದರು. ಇದೇ ವೇಳೆ ಮುಂದಿನ ಚುನಾ ವಣೆಗೆ ನಿಲ್ಲುವ ಕ್ಷೇತ್ರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಇದು ಹೈಕಮಾಂಡ್ ನಿರ್ಧಾರ ಅವರು ಎಲ್ಲಿ ನಿಲ್ಲು ಎನ್ನುತ್ತಾರೋ ಅಲ್ಲಿ ನಿಲ್ಲುತ್ತೇನೆ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಡಾ. ಜಿ. ಪರಮೇಶ್ವರ್ ಗೆ ಕೊರೊನಾ ದೃಢ