Publish Date: Thu, 23 Feb 2023 (19:43 IST)
Updated Date: Thu, 23 Feb 2023 (19:45 IST)
ಸಿದ್ದರಾಮಯ್ಯ ಅವರು ಮಾಂಸ ತಿಂದು ದೇವರ ದರ್ಶನಕ್ಕೆ ಹೋಗಿದ್ದಾರೆ ಎಂದು ಬಿಜೆಪಿ ನಾಯಕರು ರಾಜ್ಯಾದ್ಯಂತ ಸಿದ್ದರಾಮಯ್ಯ ಹಿಂದು ವಿರೋದಿ ಎಂದು ಸುದ್ದಿ ಮಾಡಿದ್ರು ಇಗಾ ಅದೇ ಸುಳಿಗೆ ಸಿಟಿ ರವಿ ಸಿಲುಕಿದ್ದಾರೆ .ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮೊನ್ನೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಬಟ್ಕಳಕ್ಕೆ ಬೇಟಿ ನೀಡಿದ ಸಂದರ್ಭದಲ್ಲಿ ದೇವಸ್ಥಾನಕ್ಕೆ ಮಾಂಸ ತಿಂದು ಹೋಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಈ ಬಗ್ಗೆ ಕಾಂಗ್ರೆಸ್ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಿಟಿ ರವಿ ವಿಚಾರವಾಗಿ ವಿಪಕ್ಷನಾಯಕ ಸಿದ್ದರಾಮಯ್ಯ ಟ್ಬೀಟ್ ಮಾಡಿದ್ದು.ಪರದೂಷಣೆಯಲ್ಲಿ ನಿರತರಾಗಿರುವ ಸಿಟಿ ರವಿ ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಸುಳ್ಳು ಸುದ್ದಿಯನ್ನೇ ಪ್ರಚಾರ ಮಾಡಿ ನನ್ನನ್ನು ಹಿಂದೂ ವಿರೋಧಿ ಎಂದು ಬಿಜೆಪಿ ನಾಯಕರು ಪ್ರಚಾರ ಮಾಡಿದ್ದರು ಆ ರೀತಿ ಅಪಪ್ರಚಾರ ಮಾಡಿದವರೆಲ್ಲರೂ ಈಗ ಸಿಟಿ ರವಿ ಅವರ ಕೃತ್ಯದಿಂದಾಗಿ ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ ಎಂದು ಸಿಟಿ ರವಿ ಕುರಿತು ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ರು. ಪ್ರಿಯಾಂಕ್ ಖರ್ಗೆ ಮಾತನಾಡಿ ಬಿಜೆಪಿಯವರಿಗೆ ಎರಡು ನಾಲಿಗೆ ಇದೆ ಅನ್ನೋದಕ್ಕೆ ಇದು ಸ್ಪಷ್ಟ ಉದಾಹರಣೆ ಎಂದು ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ್ರು.