Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿ ವಿರುದ್ಧ ಸಿದ್ದು ವಾಗ್ದಾಳಿ

ಪ್ರಧಾನಿ ಮೋದಿ ವಿರುದ್ಧ ಸಿದ್ದು ವಾಗ್ದಾಳಿ
bangalore , ಭಾನುವಾರ, 12 ಮಾರ್ಚ್ 2023 (17:08 IST)
ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದ ಹಿನ್ನೆಲೆ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಶ್ನೆ ಕೇಳಿದ್ದಾರೆ.ಭ್ರಷ್ಟ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಮಗನ ಬ್ರಹ್ಮಾಂಡ ಭ್ರಷ್ಟಾಚಾರ ,ಲೋಕಾಯುಕ್ತ ಪೊಲೀಸರು ಸಚಿತ್ರವಾಗಿ ಜಗತ್ತಿನ ಮುಂದೆ ಬಿಚ್ಚಿಟ್ಟರೂ. ನೀವು ಮಾತ್ರ ಬಾಯಿ ಬಿಚ್ಚುತ್ತಿಲ್ಲ ಯಾಕೆ ..? ಅವರ ಲೂಟಿಯಲ್ಲಿ ನಿಮಗೂ ಪಾಲಿದೆಯಾ.? ಬಿಜೆಪಿಯ ಸದ್ಯದ ಸರ್ವಶಕ್ತ ನಾಯಕರಾದ ನಿಮ್ಮ ಕೃಪಾಶೀರ್ವಾದ ಇಲ್ಲದೆ. ಭ್ರಷ್ಟ ಶಾಸಕರೊಬ್ಬರು ಕಾನೂನಿಗೆ ಅಂಜದೆ, ಮಾನ-ಮರ್ಯಾದೆಗೆ ಅಳುಕದೆ ಪ್ರಜಾತಂತ್ರ  ವ್ಯವಸ್ಥೆಯನ್ನೇ ಅಣಕಿಸುವಂತೆ,ಮೆರವಣಿಗೆ ಮಾಡಿಸಿಕೊಳ್ಳಲು ಸಾಧ್ಯವೇ ನರೇಂದ್ರ ಮೋದಿ ಅವರೇ.? ನ ಖಾವೂಂಗಾ, ನಾ ಖಾನೆ ದೂಂಗಾ ಎಂಬ ನಿಮ್ಮ ಘೋಷಣೆ, ಈಗ ನೀವು 'ತುಮ್ ಖಾವೋ, ಮುಜೆ ಬಿ ಖಿಲಾವೋ' ಎಂದು ಬದಲಾಯಿಸಿ ಕೊಂಡಿದ್ದೀರಾ ಎಂದು ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಜೆಡಿಎಸ್ ,ಕಾಂಗ್ರೆಸ್ ಗೆ ಟಾಂಗ್ ಕೊಟ್ಟ ಸುಮಲತಾ