ಸಿದ್ದರಾಮೋತ್ಸವಕ್ಕೆ 75 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಅಷ್ಟೊಂದು ಹಣ ಸಿದ್ದರಾಮಣ್ಣ ಅವರಿಗೆ ಎಲ್ಲಿಂದ ಬಂತು ಎಂದು BJP ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ. ಅವರ ಇತಿಹಾಸ ನೋಡಿ, ಸಿದ್ದರಾಮಯ್ಯ ಶ್ರೀಮಂತ ಕುಟುಂಬದಿಂದ ಬಂದಿಲ್ಲ. ಆದರೂ ಅಷ್ಟೊಂದು ಹಣ ಖರ್ಚು ಮಾಡಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಟೀಲ್ ವಾಗ್ದಾಳಿ ನಡೆಸಿದ್ರು. ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, BJP ಸರ್ಕಾರ ಭ್ರಷ್ಟಾಚಾರ ಮಾಡಿದೆ ಅಂತ ಹೇಳುತ್ತಾರೆ. ಕಾಂಗ್ರೆಸ್ನವರ ಬಳಿ ಯಾವ ದಾಖಲೆಗಳು ಇವೆ. ಸಿದ್ದರಾಮಯ್ಯ ಹತ್ತಿರ ದಾಖಲೆ ಇದ್ರೆ ಬಿಡುಗಡೆ ಮಾಡ್ಲಿ ಎಂದು ಕಟೀಲ್ ಸವಾಲೆಸೆದ್ರು. ಕೊರೋನಾ ಲಸಿಕೆಯಲ್ಲಿ ದೇಶ ಕ್ರಾಂತಿ ಮಾಡಿದೆ. ಆದರೆ ಕಾಂಗ್ರೆಸ್ ಕೊರೋನಾ ಲಸಿಕೆಯಲ್ಲಿ ರಾಜಕೀಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು.