ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ 500 ರೂ ಹಣವನ್ನು ಕೊಟ್ಟು ಸಮಾವೇಶಕ್ಕೆ ಜನರನ್ನ ಕರೆದು ತನ್ನಿ ಎಂದು ಹೇಳಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು, ಇದಕ್ಕೆ ಬಿಜೆಪಿ ನಾಯಕರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಹಿನ್ನಲೆ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು ನನ್ನ ಹೇಳಿಕೆಯ ವಿಡಿಯೋ ತಿರುಚಿ ಅಪಪ್ರಚಾರಕ್ಕೆ ಯತ್ನ`ಇದು ಮೊದಲ ಬಾರಿ ಅಲ್ಲ, ಹಿಂದೆ ಕೂಡ ಆಗಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಇನ್ನು ನಡೆಯಬಹುದು. ಬಿಜೆಪಿ ಸುಳ್ಳುಗಳ ಫ್ಯಾಕ್ಟರಿ ಎಂದು ಬಿಜೆಪಿ ನಾಯಕರಿಗೆ ತಿರಗೇಟು ನೀಡಿದರು.