ಸಿದ್ದು ವಿರುದ್ಧ ಸಿಎಂ ಬೊಮ್ಮಾಯಿ ಕಿಡಿ

Webdunia
ಶನಿವಾರ, 12 ನವೆಂಬರ್ 2022 (18:12 IST)
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡರ ಹೆಸರಿಡುವ ತೀರ್ಮಾನ ಮಾಡಿದ್ದು BJP ಸರ್ಕಾರ ಎಂದು ಬಸವರಾಜ ಬೊಮ್ಮಾಯಿ ಪ್ರತಿಪಾದಿಸಿದ್ದಾರೆ. ಈ ಮೂಲಕ ಏರ್‌ಪೋರ್ಟ್‌ಗೆ ಕೆಂಪೇಗೌಡರ ಹೆಸರಿಟ್ಟಿದ್ದು ಕಾಂಗ್ರೆಸ್‌ ಸರ್ಕಾರ ಎಂದು ಹೇಳಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಿಎಂ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಬಸವರಾಜ ಬೊಮ್ಮಾಯಿ, ಹುಟ್ಟುವ ಮಗುವಿಗೆಲ್ಲಾ ನಾಮಕರಣ ಮಾಡಿದ್ದು ನಾನೇ ಎನ್ನುವಂತೆ ಹೇಳಿಕೊಳ್ಳುವ ಸಿದ್ದರಾಮಯ್ಯನವರೇ. ಬೆಂಗಳೂರು ಏರ್‌ಪೋರ್ಟ್‌ಗೆ ನಾಡಪ್ರಭು ಕೆಂಪೇಗೌಡರ ಹೆಸರು ಇಡುವ ತೀರ್ಮಾನ ಮಾಡಿದ್ದು ಅಂದಿನ BJP ಸರ್ಕಾರ. ಫೆಬ್ರವರಿ 27, 2009ರಂದು ಅಂದಿನ ಮುಖ್ಯಮಂತ್ರಿ B.S.ಯಡಿಯೂರಪ್ಪ ನೇತೃತ್ವದ BJP ಸರ್ಕಾರ ಏರ್‌ಪೋರ್ಟ್‌ಗೆ ಕೆಂಪೇಗೌಡರ ಹೆಸರಿಡಲು ಕೆಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು ಎಂದಿದ್ದಾರೆ. ಆದರೆ, ಕೆಂಪೇಗೌಡರ ಹೆಸರನ್ನು ಏರ್‌ಪೋರ್ಟ್‌ಗೆ ಇಡಬೇಕೊ ಬೇಡವೊ ಎಂದು ತೀರ್ಮಾನ ಮಾಡಲು ಅಂದಿನ UPA ಸರ್ಕಾರ ತೆಗೆದುಕೊಂಡ ಸಮಯ ಬರೋಬ್ಬರಿ 4 ವರ್ಷ. ಟಿವಿ ಕ್ಯಾಮರಾ ಮುಂದೆ ಬಂದು ಒಳ್ಳೆಯದಕ್ಕೆಲ್ಲಾ ನಾನೇ ಕಾರಣ ಎನ್ನುವ ಸಿದ್ದರಾಮಯ್ಯರೇ, BJP ಸರ್ಕಾರ ತೆಗೆದುಕೊಂಡ ನಿರ್ಧಾರಕ್ಕೆ 4 ವರ್ಷ ನಿಮ್ಮ UPA ಸರ್ಕಾರ ಕಾಯಿಸಿದ್ದು ಯಾಕೆ? ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿಗೆ ಕಂಪನಿ ಕಡೆಯಿಂದ ಗಿಫ್ಟ್‌ ಸಿಕ್ಕಿದ್ರೆ ಹೀಗೇ ಸಿಗ್ಬೇಕು, ಎಂ ಕೆ ಭಾಟಿಯಾ ನಡೆಗೆ ಭಾರೀ ಮೆಚ್ಚುಗೆ

ಕಾಂಗ್ರೆಸ್ ಸರ್ಕಾರದ ಆತ್ಮಹತ್ಯಾ ಭಾಗ್ಯಕ್ಕೆ ಇನ್ನೆಷ್ಟು ಬಲಿಯಾಗಬೇಕು: ಆರ್ ಅಶೋಕ್ ಆಕ್ರೋಶ

ಅನುಮತಿ ಇಲ್ಲದೇ ನಡೆಯುವ ನಮಾಜ್ ನಿಷೇಧಿಸಿ: ಸಿಎಂಗೆ ಪತ್ರ ಬರೆದ ಬಸನಗೌಡ ಪಾಟೀಲ್ ಯತ್ನಾಳ್

ಕೊಟ್ಟ ಮಾತು ತಪ್ಪಿ ನಡೆಯಲು ನಾನೇನು ಮೋದಿಯಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments