Publish Date: Sun, 30 Oct 2022 (20:42 IST)
Updated Date: Sun, 30 Oct 2022 (20:44 IST)
ಸಾರಿಗೆ ಸಚಿವ ಶ್ರೀರಾಮುಲು ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ನೀನು ಅಧಿಕಾರದಲ್ಲಿದ್ದಾಗ ಏನು ಮಾಡಿದೆ ಎಂದು ಎಲ್ಲವೂ ಗೊತ್ತಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಕೊಡಲಿಲ್ಲ ಎಂದ್ರು. . ಗದಗದಲ್ಲಿ ಮಾತನಾಡಿದ ಅವರು, ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಕೊಡಬೇಕು ಅಂತಾ ಇದೆ. ಇದನ್ನು ಡಾ.ಅಂಬೇಡ್ಕರ್ ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ಆದರೆ ಇವತ್ತು SC, STಗೆ ಬಿಜೆಪಿ ಸರ್ಕಾರ ಮೀಸಲಾತಿ ಕೊಟ್ಟಿದೆ. ನಮ್ಮ ಸರ್ಕಾರ ಕೊಟ್ಟ ಬಳಿಕ ಏನೇನೋ ಹೇಳ್ತಾ ಇದ್ದೀರಲ್ಲಾ, ಈಗ ನಿಮ್ಮ ಮಾತುಗಳನ್ನು ಕೇಳುವ ಪರಿಸ್ಥಿತಿಯಲ್ಲಿ ಯಾರೂ ಇಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ರು. ಮುಂದಿನ ದಿನಗಳಲ್ಲಿ ಜನ ನಿನ್ನ ಅಹಂಕಾರ ಇಳಿಸುವ ಕೆಲಸ ಮಾಡುತ್ತಾರೆ. ನೀನು ಅಧಿಕಾರದಲ್ಲಿದ್ದಾಗ ಏನು ಮಾಡಿದೆ ಎಂದು ನಮಗೆ ಗೊತ್ತಿದೆ ಎಂದು ಸಚಿವ ಶ್ರೀರಾಮುಲು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ಮಾಡಿದ್ದಾರೆ.