Select Your Language

Notifications

webdunia
webdunia
webdunia
webdunia

ಕೆ.ಎಸ್.ಈಶ್ವರಪ್ಪ ವಿರುದ್ಧ ಸಹಿ ಸಂಗ್ರಹ ನಿಜ: ಬಿಜೆಪಿ ಶಾಸಕ

ಕೆ.ಎಸ್.ಈಶ್ವರಪ್ಪ ವಿರುದ್ಧ ಸಹಿ ಸಂಗ್ರಹ ನಿಜ: ಬಿಜೆಪಿ ಶಾಸಕ
ಬೆಂಗಳೂರು , ಬುಧವಾರ, 25 ಜನವರಿ 2017 (13:49 IST)
ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಬಿಎಸ್‌ವೈ ಬೆಂಬಲಿಗರ ಸಹಿ ಸಂಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ದಾಸರಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರಾಜು, ಕೆ.ಎಸ್.ಈಶ್ವರಪ್ಪ ಸೇರಿದಂತೆ ಕೆಲವರಿಂದ ಪಕ್ಷ ವಿರೋಧಿ ಚಟುವಟಿಕೆ ನಡೆಯುತ್ತಿದೆ. ಹೀಗಾಗಿ ಸಹಿ ಸಂಗ್ರಹಿಸಿರುವುದು ನಿಜ ನಾನು ಸಹ ಸಹಿ ಮಾಡಿದ್ದೇನೆ ಎಂದು ತಿಳಿಸಿದರು.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಭಾರತೀಯ ಜನತಾ ಪಾರ್ಟಿಯಲ್ಲಿ ಗೊಂದಲ ಸೃಷ್ಟಿಯಾಗಿದೆ. ಪಕ್ಷದಲ್ಲಿ 'ಎ' ಟೀಂ 'ಬಿ' ಟೀಂ ಅಂತ ಇಲ್ಲ. ಕೆ.ಎಸ್.ಈಶ್ವರಪ್ಪ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಅವರ ವಿರುದ್ಧ ನಾವೆಲ್ಲರೂ ಸೇರಿ ಸಹಿ ಸಂಗ್ರಹ ಮಾಡಿದ್ದು ನಿಜ ಎಂದರು
 
ಬಿಜೆಪಿ ಕಾರ್ಯಕಾರಣಿಯಲ್ಲಿ ನಡೆದ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವರು ನನ್ನ ವಿರುದ್ಧ ಸಹಿ ಸಗ್ರಹಕ್ಕೆ ಮುಂದಾಗಿದ್ದಾರೆ. ಆದರೆ, ಸಹಿ ಸಂಗ್ರಹಕ್ಕೆ ಯಾವುದೇ ಬೆಲೆ ಇಲ್ಲ, ಅದು ಅಶಿಸ್ತು. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಇಂತಹ ವ್ಯಕ್ತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕಂಬಳಕ್ಕೆ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರಕಾರ ಸಿದ್ಧತೆ