Publish Date: Sun, 16 Nov 2025 (12:19 IST)
Updated Date: Sun, 16 Nov 2025 (12:22 IST)
ಮಂಗಳೂರು: ಧರ್ಮಸ್ಥಳದ ಸುತ್ತಾಮುತ್ತಾ ಹೂತಿಟ್ಟ ಬುರುಡೆ ಪ್ರಕರಣದಲ್ಲಿ ಇದೀಗ ಮಹತ್ವದ ಬೆಳವಣಿಗೆಯಾಗಿದೆ. ತನಿಖೆ ಮಾಡಿದ ಅಧಿಕಾರಿಗಳ ವಿರುದ್ಧವೇ ದೂರುದಾರ ಟಿ. ಜಯಂತ್ ದೂರು ನೀಡಿದ್ದಾರೆ.
ಅದರಂತೆ ಎಸ್‌ಐಟಿ ತನಿಖಾಧಿಕಾರಿ ಎಸ್ ಪಿ ಜಿತೇಂದ್ರ ದಯಾಮ, ಎಸ್.ಪಿ. ಸೈಮನ್, ಡಿವೈಎಸ್ಪಿ ಆರ್ ಜಿ. ಮಂಜುನಾಥ, ಇನ್ಸ್‌ಪೆಕ್ಟರ್ ಮಂಜುನಾಥ ಗೌಡ, ಸಬ್ ಇನ್ಸ್‌ಪೆಕ್ಟರ್ ಗುಣಪಾಲ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೂರಿನಲ್ಲಿ ಜಯಂತ್ ಅವರು ವಿಚಾರಣೆ ಸಂದರ್ಭದಲ್ಲಿ ದೈಹಿಕ ಹಲ್ಲೆ, ಪ್ರಾಣ ಬೆದರಿಕೆ, ಅಪರಾಧಿಕ ಪಿತೂರಿ, ಸುಳ್ಳು ಸಾಕ್ಷಿ ಹೇಳುವಂತೆ ಒತ್ತಾಯ ಹೇರಿದ ಆರೋಪವನ್ನು ಜಯಂತ್ ಮಾಡಿದ್ದಾರೆ.
ಕಾನೂನು ಬಾಹಿರ ಕೃತ್ಯಗಳು, ಸರಕಾರಿ ಆದೇಶ ಪಾಲನೆ ಮಾಡದೇ ಕರ್ತವ್ಯ ನಿರ್ಲಕ್ಷ್ಯದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.