Select Your Language

Notifications

webdunia
webdunia
webdunia
webdunia

ಧರ್ಮಸ್ಥಳ ಬುರುಡೆ ರಹಸ್ಯದಲ್ಲಿ ಮಹತ್ವದ ಬೆಳವಣಿಗೆ, ಎಸ್‌ಐಟಿ ತನಿಖೆಗೆ ಹಾಜರಾದ ಉದಯ್ ಜೈನ್‌

ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ

Sampriya

ಮಂಗಳೂರು , ಬುಧವಾರ, 3 ಸೆಪ್ಟಂಬರ್ 2025 (14:54 IST)
ಮಂಗಳೂರು: ಧರ್ಮಸ್ಥಳ ಸುತ್ತಾಮುತ್ತಾ ಹಲವು  ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪ ಸಂಬಂಧ  ಇದೀಗ ಎಸ್‌ಐಟಿ ತನಿಖೆ ಿದೀಗ ತೀವ್ರ ಗತಿಯಲ್ಲಿ ಸಾಗಿದೆ. ಇದೀಗ ಎಸ್‌ಐಟಿ ಕಚೇರಿಗೆ ಧರ್ಮಸ್ಥಳದ ಉದಯ್ ಜೈನ್ ಅವರು ಬುಧವಾರ ಹಾಜರಾಗಿದ್ದು, ಭಾರೀ ಕುತೂಹಲ ಮೂಡಿದೆ. 

ಸೌಜನ್ಯ ಹತ್ಯೆ ಪ್ರಕರಣದಲ್ಲಿ ಉದಯ್ ಜೈನ್ ಮೇಲೆ ಗಂಭೀರ ಆರೋಪ ಕೇಳಿಬಂದಿತ್ತು. ಇದೀಗ ಎಸ್‌ಐಟಿ ಕಚೇರಿಗೆ ಧರ್ಮಸ್ಥಳದ ಉದಯ್ ಜೈನ್ ಹಾಜರಾದರು. 

ಈ ಸಂದರ್ಭದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಬುಧವಾರ 11 ಗಂಟೆಗೆ ಕಚೇರಿಗೆ ಹಾಜರಾಗುವಂತೆ ಎಸ್ಐಟಿ ಅಧಿಕಾರಿಯೊಬ್ಬರು ನಿನ್ನೆ ದೂರವಾಣಿ ಕರೆ ಮಾಡಿ ತಿಳಿಸಿದ್ದರು. ಹಾಗಾಗಿ ಇಲ್ಲಿಗೆ ಬಂದಿದ್ದೇನೆ ಎಂದು ಹೇಳಿದರು.

ಇನ್ನೂ ಸೌಜನ್ಯಾ ಕೊಲೆ ಪ್ರಕರಣದಲ್ಲಿ ಉದಯ್ ಜೈನ್, ಮಲ್ಲಿಕ್ ಜೈನ್ ಹಾಗೂ ಧೀರಜ್ ಕೆಲ್ಲ ಅವರ ಹೆಸರು ಕೂಡ ತಳಕು ಹಾಕಿಕೊಂಡಿತ್ತು.

ಸೌಜನ್ಯ ಹತ್ಯೆ ಪ್ರಕರಣದಲ್ಲಿ ನಮ್ಮ ಹೆಸರು ಇರಲಿಲ್ಲ. ಆದರೂ ನಮ್ಮನ್ನು ಆರೋಪಿಗಳನ್ನಾಗಿಸುವ ಷಡ್ಯಂತ್ರ ನಡೆದಿತ್ತು. ಸಿಬಿಐ ಮತ್ತು ಸಿಐಡಿ ಅಧಿಕಾರಿಗಳು ನಮ್ಮನ್ನು ವಿಚಾರಣೆಗೆ ಒಳಪಡಿಸಿದ್ದರು. ನಮ್ಮ ಮಂಪರು ಪರೀಕ್ಷೆಯನ್ನೂ ನಡೆಸಲಾಗಿತ್ತು. ಆ ಪ್ರಕರಣದಲ್ಲಿ ನಮ್ಮ ಪಾತ್ರ ಇಲ್ಲ ಎಂದು ಸಾಬೀತಾಗಿತ್ತು. ಈಗ ಎಸ್ಐಟಿಯವರು ಯಾವ ಪ್ರಕರಣ ಸಂಬಂಧ ವಿಚಾರಣೆಗೆ ಕರೆದಿದ್ದಾರೆ ಎಂದು ಗೊತ್ತಿಲ್ಲ. ನನ್ನಂತೆಯೇ, ಇನ್ನಿಬ್ಬರಿಗೂ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿಯವರು ಕರೆ ಮಾಡಿದ್ದಾರೆ. ನಾನು ಧೀರಜ್ ಕೆಲ್ಲ ಅವರಿಗೆ ಕರೆ ಮಾಡಿದ್ದೆ. ಆಗ ಅವರು ಈ ವಿಚಾರ ತಿಳಿಸಿದ್ದಾರೆ. ಎಸ್ಐಟಿಯವರು ಕರೆದಿದ್ದಾರೆ ಎಂದ ಮೇಲೆ ಅವರು ಕೂಡ ಬರಲೇ ಬೇಕಾಗುತ್ತದೆ ಅಲ್ಲವೇ ಎಂದು ಪ್ರತಿಕ್ರಿಯಿಸಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ರಣಮಳೆಗೆ ನರಕಸದೃಶವಾದ ಹಿಮಾಚಲ ಪ್ರದೇಶ‌: ಸಾವಿರಾರು ರಸ್ತೆಗಳ ಸಂಪರ್ಕ ಕಡಿತ