Publish Date: Sun, 28 Jun 2026 (14:31 IST)
Updated Date: Sun, 28 Jun 2026 (14:38 IST)
ಚಿಕ್ಕಬಳ್ಳಾಪುರ: ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಸಂದರ್ಭದಲ್ಲಿ ಪ್ರದೀಪ್ ಈಶ್ವರ್ ಭಾಷಣಕ್ಕೆ ಅಡ್ಡಿಪಡಿಸಿ, ಗದ್ದಲ ಸೃಷ್ಟಿ ಮಾಡಿದ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಎಸ್‌ಪಿ ಕುಶಾಲ್ ಚೌಕ್ಸಿ ಅವರು, ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ. ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಗದ್ದಲ ಮತ್ತು ಗಲಾಟೆಯಲ್ಲಿ ಸುಮಾರು 100 ರಿಂದ 150 ಕ್ಕೂ ಹೆಚ್ಚು ಮಂದಿ ಭಾಗಿಯಾಗಿರುವ ಮಾಹಿತಿ ಸಿಕ್ಕಿದೆ. ವಿಡಿಯೋ ಸಾಕ್ಷ್ಯಗಳ ಆಧಾರದ ಮೇಲೆ ಉಳಿದ ಎಲ್ಲ ಆರೋಪಿಗಳ ಪತ್ತೆಗೆ ತೀವ್ರ ಶೋಧ ಕಾರ್ಯ ಮುಂದುವರಿದಿದೆ ಎಂದು ತಿಳಿಸಿದ್ದಾರೆ.
ಇನ್ನೂ ಈ ಕಾರ್ಯಕ್ರಮದಲ್ಲಿ ಒಕ್ಕಲಿಗ ಸಮುದಾಯ ಸೇರಿದಂತೆ ವಿವಿಧ ಜಾತಿ-ಸಮುದಾಯದ ಸಾರ್ವಜನಿಕರು ಭಾಗವಹಿಸಿದ್ದರು. ಆದರೆ, ಗದ್ದಲ ಎಬ್ಬಿಸಿದವರು ಯಾವುದೇ ನಿರ್ದಿಷ್ಟ ರಾಜಕೀಯ ಪಕ್ಷದ ಕಾರ್ಯಕರ್ತರೋ ಅಥವಾ ಸಾಮಾನ್ಯ ಜನರೋ ಎಂಬ ನಿಟ್ಟಿನಲ್ಲಿ ತನಿಖೆ ನಡೆಸಲಾಗುತ್ತಿದೆ.
ಇದೇ ವೇಳೆ ಇಲಾಖೆಯ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ಎಸ್‌ಪಿ, ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆಯಿಂದ ಸಮರ್ಪಕ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಇನ್ನೂ ಇದರಲ್ಲಿ ಪೊಲೀಸರ ಯಾವುದೇ ವೈಫಲ್ಯವಿಲ್ಲ ಎಂದು ಹೇಳಿದರು.
ಶಾಸಕ ಪ್ರದೀಪ್ ಈಶ್ವರ್ ಅವರ ಮೇಲಿನ ದಾಳಿಯನ್ನು ಖಂಡಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದು, ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ನಿವಾಸದ ಎದುರು ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ದಾಳಿ ಮಾಡಿದವರನ್ನು ತಕ್ಷಣವೇ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ